Breaking News

ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ: ರಾಜ್ಯಕ್ಕೆ 5 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿ

Spread the love

ಬೆಳಗಾವಿ: ಬೇಸಿಗೆಯಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ನೀರಿನ ಅಗತ್ಯವಿದೆ.

ಹಾಗಾಗಿ 5 ಟಿಎಂಸಿ ನೀರು ಬಿಡುಗಡೆ ಕೋರಿ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಸರ್ಕಾರಕ್ಕೆ ಸಿಎಂ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ. ಕಲಬುರ್ಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಲಿರುವುದರಿಂದ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸಲು ಅನುಕೂಲವಾಗುವಂತೆ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ಒಟ್ಟಾರೆ ಐದು ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಈ ಕುರಿತು ಇಂದು ಪತ್ರವನ್ನು ಬರೆದಿದ್ದಾರೆ. ಕುಡಿಯುವ ನೀರಿನ ಅಭಾವದ ಹಿನ್ನೆಲೆಯಲ್ಲಿ ಕೃಷ್ಣಾ ಹಾಗೂ ಭೀಮಾ‌ ನದಿಗಳಿಗೆ ತಲಾ ಮೂರು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಈ ಮುಂಚೆ ಪತ್ರ ಬರೆಯಲಾಗಿತ್ತು. ಅದಕ್ಕೆ ಸ್ಪಂದಿಸಿ ಮೇ ತಿಂಗಳ ಮೊದಲ ಪಾಕ್ಷಿಕ ಅವಧಿಯಲ್ಲಿ ಕೃಷ್ಣಾ ನದಿಗೆ ಒಂದು ಟಿಎಂಸಿ ನೀರು ಬಿಡುಗಡೆ ಮಾಡಿರುವ ಮಹಾರಾಷ್ಟ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿರುವ ಮುಖ್ಯಮಂತ್ರಿಗಳು, ಉತ್ತರ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಮಾನವೀಯತೆ ದೃಷ್ಟಿಯಿಂದ ನೀರು ಹರಿಸಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.

ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ತಪ್ಪಿಸಲು ಮಹಾರಾಷ್ಟ್ರ ರಾಜ್ಯದ ವಾರಣಾ ಮತ್ತು ಕೊಯ್ನಾ ಜಲಾಶಯಗಳಿಂದ 2 ಟಿ‌ಎಂಸಿ ಹೆಚ್ಚುವರಿಯಾಗಿ ಕೃಷ್ಣಾ ನದಿಗೆ ಬಿಡುಗಡೆಗೊಳಿಸಬೇಕು.‌ ಅದೇ ರೀತಿ ಮಹಾರಾಷ್ಟ್ರದ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರು ಬಿಡುಗಡೆ ಮಾಡಲು ಸಂಬಂಧಿಸಿದವರಿಗೆ ಕೂಡಲೇ ಸೂಚನೆ ನೀಡಬೇಕು ಎಂದು ಪತ್ರದಲ್ಲಿ ವಿನಂತಿಸಿದ್ದಾರೆ. ಜೂನ್ ಮಾಹೆಯಲ್ಲಿ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಒಟ್ಟಾರೆ ಐದು ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

ಕೆಲ ಚಂಡಮಾರುತಗಳ ಪ್ರಭಾವದಿಂದಾಗಿ ಈ ಬಾರಿ ರಾಜ್ಯಕ್ಕೆ ಮುಂಗಾರು ಮಳೆ ವಿಳಂಬವಾಗುವ ಸಾಧ್ಯತೆ ಇದೆ. ಕಳೆದ ವರ್ಷ ಈ ವೇಳೆಗಾಗಲೇ ಮುಂಗಾರು ರಾಜ್ಯವನ್ನು ಪ್ರವೇಶ ಮಾಡಿತ್ತು. ಈ ಬಾರಿ ಜೂನ್​ ಮೊದಲ ವಾರದಲ್ಲಿ ನೈರುತ್ಯ ಮಾನ್ಸೂನ್​ ಮಾರುತಗಳು ಕೇರಳ ರಾಜ್ಯವನ್ನು ಪ್ರವೇಶಿಸುವ ಸಾಧ್ಯತೆಗಳಿವೆ. ಹೀಗಾಗಿ ರಾಜ್ಯಕ್ಕೆ ಜೂನ್​​ 8 ರ ಮೇಲೆ ಮುಂಗಾರು ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.

ಅಲ್ಲಲ್ಲಿ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆಗುತ್ತಿದೆ. ಆದರೆ ಇದು ಬೇಸಿಗೆ ಬಿಸಿಲನ್ನು ತಣಿಸುಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಕಡೆ ನೀರಿನ ಅಭಾವ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಮಾನವೀಯ ನೆಲೆಯಲ್ಲಿ ನೀರು ಬಿಡುವಂತೆ ಮನವಿ ಮಾಡಿದೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ