Breaking News

ಯಾರಿಗೆ ಸಿಗಲಿದೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಪಟ್ಟ..?

Spread the love

ಹುಬ್ಬಳ್ಳಿ: ಧಾರವಾಡ ಉಸ್ತುವಾರಿಗೆ ಕಾಂಗ್ರೆಸ್ ಆಂತರಿಕ ವಲಯದಲ್ಲಿ ತೀವ್ರ ಪೈಪೋಟಿ ನಡೆದಿದೆ ಎನ್ನಲಾಗುತ್ತಿದೆ. ಜಿಲ್ಲೆಯಲ್ಲಿ ಸಂತೋಷ್​ ಲಾಡ್ ಸಚಿವರಿದ್ದಾಗಲೂ ಲಕ್ಷ್ಮಿ ಹೆಬ್ಬಾಳ್ಕರ್‌ ಆಸಕ್ತಿ ವಹಿಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಧಾರವಾಡ ಜಿಲ್ಲೆಗೆ ಒಂದೇ ಒಂದು ಸಚಿವ ಸ್ಥಾನ ದೊರೆತಿದೆ. ತೀವ್ರ ಪೈಪೋಟಿ ನಡುವೆ ಕಲಘಟಗಿ ಶಾಸಕ ಸಂತೋಷ ಲಾಡ್ ಸಚಿವರಾಗಿದ್ದಾರೆ. ಆದರೆ, ಇದೀಗ ಜಿಲ್ಲಾ ಉಸ್ತುವಾರಿ ಸಚಿವರು ಯಾರಾಗುತ್ತಾರೆ ಎಂಬ ಕುತೂಹಲ, ಚರ್ಚೆ ಜಿಲ್ಲೆಯಲ್ಲಿ ಜೋರಾಗಿಯೇ ನಡೆದಿದೆ.

ಪಟ್ಟು ಹಿಡಿಯುವ ಸಾಧ್ಯತೆ ಹೆಚ್ಚು: ಸಂಪ್ರದಾಯದಂತೆ ಸಂತೋಷ ಲಾಡ್ ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವರಾಗಬೇಕು. ಆದರೆ, ಧಾರವಾಡ ಜಿಲ್ಲೆಯ ಉಸ್ತುವಾರಿ ಆಗಲು ಪ್ರಥಮ ಬಾರಿಗೆ ಸಚಿವೆಯಾಗಿರುವ ಬೆಳಗಾವಿ ಜಿಲ್ಲೆಯ ಲಕ್ಷ್ಮಿ ಹೆಬ್ಬಾಳ್ಕರ್‌ ಆಸಕ್ತಿ ವಹಿಸಿದ್ದಾರೆ. ಈ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬಂದಿದೆ.

ಒಂದು ವೇಳೆ ಲಕ್ಷ್ಮಿ ಹೆಬ್ಬಾಳ್ಕರ್‌ ಧಾರವಾಡ ಜಿಲ್ಲೆ ಉಸ್ತುವಾರಿ ಸಚಿವರಾದರೇ, ಸಂತೋಷ ಲಾಡ್ ಪಕ್ಕದ ಹಾವೇರಿ ಜಿಲ್ಲೆಯಲ್ಲಿ ಯಾರು ಸಚಿವರಿಲ್ಲದ‌ ಕಾರಣ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿರುವ ಸಂತೋಷ ಲಾಡ್ ಯಾವುದೇ ಕಾರಣಕ್ಕೂ ಬೇರೆ ಜಿಲ್ಲೆಯ ಉಸ್ತುವಾರಿ ಒಪ್ಪಿಕೊಳ್ಳುವ ಸಾಧ್ಯತೆ ಕಡಿಮೆ. ಕೊಡುವುದಾದರೆ ಧಾರವಾಡ ಜಿಲ್ಲೆಯ ಉಸ್ತುವಾರಿಯನ್ನೇ ನೀಡಬೇಕು ಎನ್ನುವ ಪಟ್ಟು ಹಿಡಿಯುವ ಸಾಧ್ಯತೆ ಹೆಚ್ಚಿದೆ.

ಲಕ್ಷ್ಮಿ ಹೆಬ್ಬಾಳ್ಕರ್​ಗೆ ಬೆಳಗಾವಿ ಉಸ್ತುವಾರಿ ಸಿಗುವ ಸಾಧ್ಯತೆ ಕಡಿಮೆ: ಇನ್ನೂ ಸಿದ್ದರಾಮಯ್ಯ ಅವರು ಲಾಡ್‌ಗೆ ಧಾರವಾಡ ಜಿಲ್ಲಾ ಉಸ್ತುವಾರಿ ವಹಿಸುವುದರಲ್ಲಿ ಯಾವುದೇ ಸಂಶಯವಿಲ್ಲ.‌ ಇನ್ನೊಂದು ಕಡೆ ಡಿಸಿಎಂ ಡಿಕೆಶಿ ಆಪ್ತರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿಗೆ ಬೆಳಗಾವಿ ಉಸ್ತುವಾರಿ ಸಿಗುವ ಸಾಧ್ಯತೆ ಕಡಿಮೆ. ಏಕೆಂದರೆ ಹಿರಿಯ ಸಚಿವ ಸತೀಶ ಜಾರಕಿಹೊಳಿ ತಮ್ಮ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಬಿಟ್ಟುಕೊಡಲು ಒಪ್ಪುವುದಿಲ್ಲ. ಹೀಗಾಗಿ ಲಕ್ಷ್ಮಿ ಡಿಕೆಶಿ ಮೂಲಕ ಧಾರವಾಡ ಜಿಲ್ಲಾ ಉಸ್ತುವಾರಿಗೆ ಪಟ್ಟು ಹಿಡಿಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

 

ಯಾರ ಮೇಲೆ ಇರಲಿದೆ ಸಿದ್ದು-ಡಿಕೆಶಿ ಕೃಪೆ?: ಇಬ್ಬರ ನಡುವೆ ಉಸ್ತುವಾರಿಗೆ ಪೈಪೋಟಿ ಏರ್ಪಟ್ಟಿದೆ. ಇದರ ನಡುವೇ ಆಗಾಗ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹುಬ್ಬಳ್ಳಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಇದಕ್ಕೆ ಇಂಬು ನೀಡುತ್ತಿದೆ.‌ ಇಂದು ಡಿ.ಕೆ. ಶಿವಕುಮಾರ ಜೊತೆ ಜಗದೀಶ್ ಶೆಟ್ಟರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಿದ್ದು-ಡಿಕೆಶಿಯ ಕೃಪೆ ಯಾರ ಮೇಲಾಗುತ್ತದೆ ಎಂಬುದು ಈಗ ಕುತೂಹಲ ಮೂಡಿಸಿದೆ.

 


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ