Home / ರಾಜಕೀಯ / ಒಡಿಶಾ ರೈಲು ಅಪಘಾತ ಸಂತ್ರಸ್ತರಿಗೆ ನಿಯಮ ಸರಳೀಕರಿಸಿದ LIC

ಒಡಿಶಾ ರೈಲು ಅಪಘಾತ ಸಂತ್ರಸ್ತರಿಗೆ ನಿಯಮ ಸರಳೀಕರಿಸಿದ LIC

Spread the love

ಮುಂಬೈ: ಒಡಿಶಾದ ಬಾಲಸೋರ್ ರೈಲು ದುರಂತದ ಸಂತ್ರಸ್ತರಿಗೆ ಕ್ಲೈಮ್ ಪಾವತಿ ಪ್ರಕ್ರಿಯೆಗೆ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಶನಿವಾರ ಹಲವು ನಿಯಮಗಳ ಸಡಿಲಿಕೆಗಳನ್ನು ಪ್ರಕಟಿಸಿದೆ.

ಎಲ್‌ಐಸಿ ಅಧ್ಯಕ್ಷ ಸಿದ್ಧಾರ್ಥ ಮೊಹಂತಿ, ಸಂತ್ರಸ್ತರ ಸಂಬಂಧಿಕರಿಗೆ ಕ್ಲೈಮ್ ಪಾವತಿ ಪ್ರಕ್ರಿಯೆಗೆ ಸಡಿಲಿಕೆಗಳನ್ನು ಘೋಷಿಸಿದರು. “ಶುಕ್ರವಾರ ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಎಲ್‌ಐಸಿ ಸಂತ್ರಸ್ತರಿಗೆ ಬೆಂಬಲ ನೀಡಲು ಬದ್ಧವಾಗಿದೆ ಮತ್ತು ಹಣಕಾಸಿನ ಪರಿಹಾರವನ್ನು ಒದಗಿಸಲು ಕ್ಲೈಮ್ ಪಾವತಿಯನ್ನು ತ್ವರಿತಗೊಳಿಸುತ್ತದೆ” ಎಂದು ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಎಲ್‌ಐಸಿ ಪಾಲಿಸಿಗಳ ಹಕ್ಕುದಾರರ ಕಷ್ಟಗಳನ್ನು ತಗ್ಗಿಸಲು ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆಗೆ ಸಹ ನಿಗಮವು ಅನೇಕ ರಿಯಾಯಿತಿಗಳನ್ನು ನೀಡಿದೆ. ನೋಂದಾಯಿತ ಮರಣ ಪ್ರಮಾಣಪತ್ರಗಳ ಬದಲಿಗೆ ರೈಲ್ವೆ, ಪೊಲೀಸ್ ಅಥವಾ ಯಾವುದೇ ರಾಜ್ಯ ಅಥವಾ ಕೇಂದ್ರ ಅಧಿಕಾರಿಗಳು ಪ್ರಕಟಿಸಿದ ಸಾವುನೋವುಗಳ ಪಟ್ಟಿಯನ್ನು ಸಾವಿನ ಪುರಾವೆಯಾಗಿ ಸ್ವೀಕರಿಸಲಾಗುವುದು ಎಂದು ಸಂಸ್ಥೆ ತಿಳಿಸದೆ.

ಸಹಾಯವಾಣಿ ಕೇಂದ್ರ ಆರಂಭ: ಕ್ಲೈಮ್-ಸಂಬಂಧಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಲು ಮತ್ತು ಹಕ್ಕುದಾರರಿಗೆ ಸಹಾಯವನ್ನು ಒದಗಿಸಲು ಕಾರ್ಪೊರೇಷನ್ ವಿಭಾಗೀಯ ಮತ್ತು ಶಾಖೆಯ ಮಟ್ಟದಲ್ಲಿ ವಿಶೇಷ ಸಹಾಯ ಕೇಂದ್ರ ಮತ್ತು ಸಹಾಯವಾಣಿ ಕೇಂದ್ರವನ್ನು (022-68276827) ಸ್ಥಾಪಿಸಿದೆ. ಹಕ್ಕುದಾರರನ್ನು ತಲುಪಲು ಮತ್ತು ಸಂತ್ರಸ್ತ ಕುಟುಂಬಗಳಿಗೆ ಕ್ಲೈಮ್‌ಗಳನ್ನು ತ್ವರಿತವಾಗಿ ನೀಡಲು ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದು ಹೇಳಿಕೆಯಲ್ಲಿ ಮಾಹಿತಿ ನೀಡಿದೆ.

₹10 ಲಕ್ಷದವರೆಗೆ ವಿಮಾ ಪರಿಹಾರ: ಇಂಡಿಯನ್ ರೈಲ್ವೆ ಕೇಟರಿಂಗ್ ಆಯಂಡ್ ಟೂರಿಸಮ್ ಕಾರ್ಪೊರೇಷನ್ (ಐಆರ್‌ಸಿಟಿಸಿ) ತನ್ನ ಪ್ರಯಾಣಿಕರಿಗೆ ರೈಲು ಟಿಕೆಟ್‌ಗಳನ್ನು ಕಾಯ್ದಿರಿಸುವಾಗ ವಿಮೆ ಆಯ್ಕೆ ಮಾಡಿಕೊಂಡವರಿಗೆ ರೂ. 10 ಲಕ್ಷದವರೆಗೆ ವಿಮಾ ರಕ್ಷಣೆ ಒದಗಿಸುತ್ತದೆ.

ಅಪಘಾತದ ಬಳಿಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮೃತರಿಗೆ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 50,000 ರೂಪಾಯಿಗಳನ್ನು ನೀಡುವುದಾಗಿ ಘೋಷಿಸಿದರು. ಆದರೆ ಐಆರ್‌ಸಿಟಿಸಿಯಲ್ಲಿ ಟಿಕೆಟ್ ಬುಕ್ ಮಾಡುವಾಗ ಪ್ರಯಾಣಿಕರು ತೆಗೆದುಕೊಳ್ಳುವ ಪ್ರಯಾಣ ವಿಮೆಗೆ ಐಆರ್‌ಸಿಟಿಸಿ ವಿಮಾ ರಕ್ಷಣೆಯನ್ನು ಒದಗಿಸುತ್ತದೆ.

ಹೌದು, ರೈಲ್ವೆ ಟ್ರಾವೆಲ್ ಇನ್ಶೂರೆನ್ಸ್ ಪ್ರಯಾಣಿಕರು ಟಿಕೆಟ್ ಬುಕ್ ಮಾಡುವಾಗ ಕೇವಲ 35 ಪೈಸೆಗಳನ್ನು ನೀಡುತ್ತಾರೆ. ಈ ಸೌಲಭ್ಯದ ಮೂಲಕ ಐಆರ್‌ಸಿಟಿಸಿ ತನ್ನ ಪ್ರಯಾಣಿಕರಿಗೆ ರೂ 10 ಲಕ್ಷದವರೆಗೆ ವಿಮಾ ರಕ್ಷಣೆ ಒದಗಿಸುತ್ತದೆ. ಈ ವಿಮೆಯ ಅಡಿಯಲ್ಲಿ, ಪ್ರಯಾಣಿಕರು ತಮ್ಮ ರೈಲು ಪ್ರಯಾಣದ ಸಮಯದಲ್ಲಿ ಬೆಲೆಬಾಳುವ ವಸ್ತುಗಳು ಮತ್ತು ಸಾಮಾನುಗಳ ಯಾವುದೇ ನಷ್ಟಕ್ಕೆ ಪರಿಹಾರ ಪಡೆಯುತ್ತಾರೆ. ಅಲ್ಲದೇ ಅಪಘಾತದ ಸಂದರ್ಭದಲ್ಲಿ, ಚಿಕಿತ್ಸೆಯ ವೆಚ್ಚಗಳು ಮತ್ತು ಮರಣದ ಸಂದರ್ಭದಲ್ಲಿ, ವಿಮಾದಾರನ ನಾಮಿನಿಗೆ ಪರಿಹಾರ ನೀಡಲಾಗುತ್ತದೆ.

ಪರಿಹಾರದ ವಿವರ: ಪ್ರಯಾಣಿಕರು ರೈಲು ಅಪಘಾತದಲ್ಲಿ ಮರಣ ಹೊಂದಿದರೆ ಅಥವಾ ಶಾಶ್ವತವಾಗಿ ಅಂಗವಿಕಲರಾಗಿದ್ದರೆ 10 ಲಕ್ಷ ರೂ.ವರೆಗೆ ವಿಮಾ ಮೊತ್ತ ಪಾವತಿಸಲಾಗುತ್ತದೆ. ಪ್ರಯಾಣಿಕರು ಭಾಗಶಃ ಅಂಗವಿಕಲರಾದರೆ ಅವರಿಗೆ ಪರಿಹಾರವಾಗಿ 7.5 ಲಕ್ಷ ರೂ., ಗಂಭೀರ ಗಾಯಗಳಾದರೆ 2 ಲಕ್ಷ ರೂ., ಸಣ್ಣಪುಟ್ಟ ಗಾಯಗಳಾದರೆ 10,000 ರೂ.ವರೆಗೆ ನೆರವು ನೀಡಲಾಗುತ್ತದೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ