Breaking News

ಆಸ್ತಿ ವಿಚಾರವಾಗಿ ಸಹೋದರರ ಮಧ್ಯೆ ನಡೆದ ಜಗಳ ಓರ್ವನ

Spread the love

ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಸಹೋದರರ ಮಧ್ಯೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಭಾನುವಾರ ನಡೆದಿದೆ.

ಹತ್ಯೆಯಾದ ವ್ಯಕ್ತಿ ತಿಗಡಿ ಗ್ರಾಮದ ನಿವಾಸಿ ಸುರೇಶ್ ಖಣಗಾಂವಿಯಾಗಿದ್ದು, ಶಂಕರ್ ಖಣಗಾಂವಿ ಕೊಲೆ ಮಾಡಿದ ವ್ಯಕ್ತಿ ಎಂದು ತಿಳಿದು ಬಂದಿದೆ.

ಹತ್ಯೆಗೀಡಾದ ಸುರೇಶ್ ಮಾಜಿ ಸೈನಿಕನಾಗಿದ್ದು, ಸದ್ಯ ಜಮೀನಿನಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದರು. ಆಸ್ತಿ ವಿಚಾರವಾಗಿ ಆರೋಪಿ ಶಂಕರ್ ಖಣಗಾಂವಿ ಹಾಗೂ ಹತ್ಯೆಗೀಡಾದ ಸುರೇಶ್ ಮಧ್ಯೆ ವಾಗ್ವಾದ ನಡೆದಿದೆ.ಇದು ವಿಕೋಪಕ್ಕೆ ತಿರುಗಿದ್ದರಿಂದ ಸುರೇಶ್’ನ ಚಿಕ್ಕಪ್ಪ ಶಂಕರ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದರಿಂದ ಬಲವಾಗಿ ಪೆಟ್ಟು ಬಿದ್ದಿದ್ದರಿಂದ ಸುರೇಶ್ ಖಣಗಾಂವಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸ್ಥಳದಲ್ಲೇ ಇದ್ದ ಸದಾ ಖಣಗಾಂವಿಗೆ ಗಂಭೀರವಾಗಿ ಗಾಯವಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬೈಲಹೊಂಗಲ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ: ಒಂದೇ ವರ್ಷದಲ್ಲಿ ಅಪಘಾತಕ್ಕೆ 800 ಬಲಿ

Spread the loveಬೆಳಗಾವಿ: ಜಿಲ್ಲೆಯಲ್ಲಿ ಚಾಲಕರ ರ್ನಿಲಕ್ಷ$್ಯ ಮದ್ಯಸೇವನೆ ಮಾಡಿ ವಾಹನ ಚಲಾವಣೆ, ಅತಿಯಾದ ವೇಗ ಹೀಗೆ ವಿವಿಧ ಕಾರಣಗಳಿಂದ ರಸ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ