ಕೋಲಾರ ತಾಲೂಕಿನ ಅರಾಬಿಕೊತ್ತನೂರು ಗ್ರಾಮದಲ್ಲಿ ಕ್ವಾರೆಯಲ್ಲಿನ ನೀರಲ್ಲಿ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬಳ್ಳಾರಿ ಮೂಲದ ಮೆಡಿಕಲ್ ವಿದ್ಯಾರ್ಥಿನಿ ದರ್ಶಿನಿ(24) ಮೃತದೇಹ ಪತ್ತೆಯಾಗಿದೆ.
ದರ್ಶಿನಿ ಹೊಸಕೋಟೆ ತಾಲೂಕಿನ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯಾಗಿದ್ದು, ಸ್ನೇಹಿತರಿಗೆ ಫೋನ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಳು ಎನ್ನಲಾಗಿದೆ.
ದರ್ಶಿನಿಯ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರ ತೆಗೆದಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಸ್ಥಳಕ್ಕಾಗಮಿಸಿದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ