Breaking News
Home / ರಾಜಕೀಯ / ಒಡಿಶಾ ರೈಲು ದುರಂತ.. ಸಂತ್ರಸ್ತ ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತ ಗೌತಮ್ ಅದಾನಿ

ಒಡಿಶಾ ರೈಲು ದುರಂತ.. ಸಂತ್ರಸ್ತ ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತ ಗೌತಮ್ ಅದಾನಿ

Spread the love

ಅಹಮದಾಬಾದ್ (ಗುಜರಾತ್): ಒಡಿಶಾದ ಭೀಕರ ರೈಲು ದುರಂತದಲ್ಲಿ ಪೋಷಕರನ್ನು ಕಳೆದುಕೊಂಡು ಸಂತ್ರಸ್ತರಾಗಿರುವ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಅದಾನಿ ಗ್ರೂಪ್ ಮುಂದಾಗಿದೆ.

ಈ ಬಗ್ಗೆ ಖ್ಯಾತಿ ಉದ್ಯಮಿ, ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಪ್ರಕಟಿಸಿದ್ದಾರೆ.

ಒಡಿಶಾ ರೈಲು ಅಪಘಾತದ ಸುದ್ದಿಯಿಂದ ತಾನು ತೀವ್ರ ದುಃಖಿತನಾಗಿದ್ದೇನೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಶಕ್ತಿಯನ್ನು ನೀಡುವುದು ಮತ್ತು ಮಕ್ಕಳಿಗೆ ಉತ್ತಮ ನಾಳೆಗಳನ್ನು ಒದಗಿಸುವುದು ನಮ್ಮೆಲ್ಲರ ಜಂಟಿ ಜವಾಬ್ದಾರಿಯಾಗಿದೆ ಎಂದು ಗೌತಮ್ ಅದಾನಿ ತಮ್ಮ ಟ್ವಿಟರ್‌ನಲ್ಲಿ ಬರೆದಿದ್ದಾರೆ. ಅಲ್ಲದೇ, ಈ ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಸಮೂಹವು ತೆಗೆದುಕೊಳ್ಳಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಒಡಿಶಾದ ಬಾಲಸೋರ್​ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದ ಸಮೀಪದಲ್ಲಿ ಶುಕ್ರವಾರ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು – ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹಾಗೂ ಗೂಡ್ಸ್ ರೈಲುಗಳು ಅಪಘಾತಕ್ಕೆ ಈಡಾಗಿವೆ. ಈ ಭೀಕರ ಅಪಘಾತದಲ್ಲಿ ಈ ಎರಡು ಪ್ಯಾಸೆಂಜರ್ ರೈಲುಗಳ 17 ಬೋಗಿಗಳು ಹಳಿತಪ್ಪಿ ತೀವ್ರವಾಗಿ ಹಾನಿಗೀಡಾಗಿವೆ. ಪರಿಣಾಮ ಇದುವರೆಗೆ 275 ಜನ ಪ್ರಯಾಣಿಕರು ಬಲಿಯಾಗಿದ್ದು, 1,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಈಗಾಗಲೇ ಮೃತ 275 ಜನರ ಪೈಕಿ 88 ಮಂದಿಯ ಗುರುತಿಸಲಾಗಿದೆ. ಭಾನುವಾರ ಬೆಳಗಿನ ಜಾವದವರೆಗೆ 78 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಭುವನೇಶ್ವರದ ಶವಾಗಾರಗಳು ಮತ್ತು ಇತರ ಆಸ್ಪತ್ರೆಗಳಾದ ಏಮ್ಸ್, ಕ್ಯಾಪಿಟಲ್ ಆಸ್ಪತ್ರೆ, ಎಸ್‌ಯುಎಂ, ಕೆಐಎಂ ಮತ್ತು ಎಎಂಆರ್‌ಐ ಆಸ್ಪತ್ರೆಗಳಲ್ಲಿ 170 ಮೃತದೇಹಗಳು ಇವೆ. ಭಾನುವಾರ ಬೆಳಿಗ್ಗೆ ತನಕ 793 ಜನ ಗಾಯಾಳು ಪ್ರಯಾಣಿಕರನ್ನು ಡಿಸ್ಚಾರ್ಜ್​ ಮಾಡಲಾಗಿದೆ. ಇನ್ನೂ 382 ಜನ ಗಾಯಾಳುಗಳು ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಈ ರೈಲು ದುರಂತದ ಬಗ್ಗೆ ಸಿಬಿಐ (ಕೇಂದ್ರೀಯ ತನಿಖಾ ಸಂಸ್ಥೆ) ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ