Breaking News

ಪ್ರತಿ ತಿಂಗಳು ಪತಿಗೆ 2 ಸಾವಿರ ಜೀವನಾಂಶ ನೀಡಿ – 58ರ ಪತ್ನಿಗೆ ಕೋರ್ಟ್ ಆದೇಶ

Spread the love

ಲಕ್ನೋ: ಪತಿಗೆ ಪ್ರತಿ ತಿಂಗಳು 2 ಸಾವಿರ ರೂ. ಜೀವನಾಂಶ ನೀಡುವಂತೆ 58 ವರ್ಷದ ಮಹಿಳೆಗೆ ಕೋರ್ಟ್ ಆದೇಶಿಸಿದೆ.ಮುಜಾಫರ್ ನಗರ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದ್ದು, 62 ವರ್ಷದ ಕಿಶೋರಿ ಲಾಲ್ ಸೊಹಂಕರ್ ಟೀ ಅಂಗಡಿ ನಡೆಸುತ್ತಿದ್ದು, ಇವರಿಗೆ ಬೇರೆ ಯಾವುದೇ ಆದಾಯ ಮೂಲವಿಲ್ಲ. ಆದರೆ 58 ವರ್ಷದ ಇವರ ಪತ್ನಿ ಮುನ್ನಿ ದೇವಿ ಸೇನೆಯಿಂದ ನಿವೃತ್ತಿ ಹೊಂದಿದವರಾಗಿದ್ದಾರೆ. ಹೀಗಾಗಿ ಇವರಿಗೆ 12 ಸಾವಿರ ರೂ. ಪೆನ್ಷನ್ ಬರುತ್ತದೆ. ಇದರಲ್ಲಿ 2 ಸಾವಿರ ರೂ. ನೀಡುವಂತೆ ಕೋರ್ಟ್ ಆದೇಶಿಸಿದೆ.

ಕಿಶೋರ್ ಲಾಲ್ ಸೊಹಂಕರ್ ಮುಜಾಫರ್ ನಗರದ ಖಟುವಾಲಿಯಲ್ಲಿ ಟೀ ಅಂಗಡಿ ಇಟ್ಟುಕೊಂಡಿದ್ದು, ಸೇನೆಯಲ್ಲಿ ಕಾರ್ಯನಿರ್ವಹಿಸಿ ಇತ್ತೀಚೆಗೆ ನಿವೃತ್ತರಾಗಿರುವ ಇವರ ಪತ್ನಿ 12 ಸಾವಿರ ರೂ. ಪಿಂಚಣಿ ಪಡೆಯುತ್ತಾರೆ.

ಆರಂಭದಲ್ಲಿ ಕಿಶೋರಿ ಲಾಲ್ ಸೊಹಂಕರ್ ಪತ್ನಿಯನ್ನು ಮನೆಗೆ ಬರುವಂತೆ ನಿರ್ದೇಶಿಸಬೇಕೆಂದು ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಆದರೆ ಪತ್ನಿ ಇವರ ಜೊತೆಗೆ ಇರಲು ಒಪ್ಪಿಲ್ಲ. ಹೀಗಾಗಿ ಸೊಹಂಕರ್ ತನ್ನ ಜೀವನ ನಿರ್ವಹಣೆಗೆ ಪ್ರತಿ ತಿಂಗಳ ಹಣ ಕೊಡಿಸುವಂತೆ ಕೋರ್ಟ್ ಬಳಿ ಮನವಿ ಮಾಡಿದರು ಎಂದು ಸೊಹಂಕರ್ ಪರ ವಕೀಲ ಬಿ.ಕೆ.ತಾಯಲ್ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ