Breaking News
Home / ರಾಜಕೀಯ / ಜೂನ್​ 8 ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಜೂನ್​ 8 ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

Spread the love

ಜೂನ್​ 8 ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ತಾಳಿಕೋಟೆ, ಬೈಲಹೊಂಗಲ, ಬಸವನ ಬಾಗೇವಾಡಿ, ಶಿರಾಲಿ, ಮುನಿರಾಬಾದ್, ಬೀದರ್, ಕಾರವಾರ, ಸಿದ್ದಾಪುರ, ನಿಟ್ಟೂರು, ಸೇಡಂ, ನರಗುಂದದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಘುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಮಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ

Spread the loveಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ