Breaking News
Home / ರಾಜಕೀಯ / ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಜೂನ್ 11ರಿಂದ ಜಾರಿ: ಸರ್ಕಾರದ ಗೈಡ್​ಲೈನ್ಸ್​​ ಏನು?

ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಜೂನ್ 11ರಿಂದ ಜಾರಿ: ಸರ್ಕಾರದ ಗೈಡ್​ಲೈನ್ಸ್​​ ಏನು?

Spread the love

ಬೆಂಗಳೂರು: ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್​ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ ‘ಶಕ್ತಿ ಯೋಜನೆ’ ಯನ್ನು ಜಾರಿಗೊಳಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ಅಡಿ ರಾಜ್ಯದ ಎಲ್ಲಾ ಮಹಿಳೆಯರು ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕರಾರಸಾ ನಿಗಮ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾಕರಸಾ ಸಂಸ್ಥೆ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕಕರಸಾ ನಿಗಮ) ಸಾಮಾನು ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ ಒದಗಿಸಲು ತಾತ್ವಿಕ ಅನುಮೋದನೆ ನೀಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ.

ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು, ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ (ಎಸಿ ಬಸ್‌ ಮತ್ತು ಐಷಾರಾಮಿ (ಲಕ್ಸುರಿ) ಬಸ್‌ಗಳನ್ನು ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಈ ಕೆಳಕಂಡ ಷರತ್ತುಗಳೊಂದಿಗೆ ಜೂನ್ 11ರಿಂದ “ಶಕ್ತಿ ಯೋಜನೆ”ಯನ್ನು ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.

ಶಕ್ತಿ ಯೋಜನೆಗೆ ಅನ್ವಯಿಸುವ ಷರತ್ತುಗಳೇನು..?

  1. ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ (ಎಲ್ಲಾ ಅಂತಾರಾಜ್ಯ ಸಾರಿಗೆ ಅನುಸೂಚಿಗಳನ್ನು ಹೊರತುಪಡಿಸಿ) ಈ ಯೋಜನೆ ಅನ್ವಯಿಸುತ್ತದೆ.
  2. ಐಷಾರಾಮಿ (Luxury) ಬಸ್‌ಗಳಾದ ರಾಜಹಂಸ, ನಾನ್- ಎಸಿ ಸ್ಲೀಪರ್ ಹಾಗೂ ವಜ್ರ, ವಾಯುವಜ್ರ , ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎಸಿ ಬಸ್​ಗಳು, ಇವಿ ಪವರ್ ಪ್ಲಸ್ (ಎ.ಸಿ. ಬಸ್‌ಗಳು) ಇವುಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ.
  3. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹೊರತುಪಡಿಸಿ ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲಾ ಬಸ್​ಗಳಲ್ಲಿ (ಅಂತರ ರಾಜ್ಯ ಎಸಿ ಮತ್ತು ಐಷಾರಾಮಿ ಬಸ್​ಗಳನ್ನು ಹೊರತುಪಡಿಸಿ) ಶೇ.50 ರಷ್ಟು ಆಸನಗಳನ್ನು ಪುರುಷರಿಗೆ ಕಾಯಿರಿಸಿದೆ.
  4. ಈ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್, ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶವನ್ನು ಆಧರಿಸಿ ಭರಿಸಲಾಗುವುದು. (Reimbursement to Road Transport Corporation would be made on the basis of actual distance travelled by women passengers)
  5. ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು, “ಶಕ್ತಿ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುತ್ತದೆ.
  6. ಶಕ್ತಿ ಸ್ಮಾರ್ಟ್ ಕಾರ್ಡ್​ನ್ನು ವಿತರಿಸುವವರೆಗೆ ಭಾರತ ಸರ್ಕಾರ/ ಕರ್ನಾಟಕ ಸರ್ಕಾರದ ಇಲಾಖೆ/ ಸರ್ಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ