Breaking News

ಪಾಠ ನಡೆಯುತ್ತಿದ್ದ ಸಂದರ್ಭದಲ್ಲೇ ಶಾಲಾ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ

Spread the love

ಬಳ್ಳಾರಿ: ಪಾಠ ನಡೆಯುತ್ತಿದ್ದ ಸಂದರ್ಭದಲ್ಲೇ ಶಾಲಾ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದಲ್ಲಿರುವ ಸುದೀಕ್ಷಾ ಇಂಟರ್​ ನ್ಯಾಷನಲ್ ಸ್ಕೂಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪವರ್ ಕಟ್ ಆಗಿ ಜನರೇಟರ್​ ಆನ್ ಮಾಡಿದಾಗ ಜನರೇಟರ್ ರೂಮ್ ಹಾಗೂ ಮತ್ತೊಂದು ರೂಮ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಶಾಲೆಯಲ್ಲಿದ್ದ 150 ವಿದ್ಯಾರ್ಥಿಗಳನ್ನು ಶಾಲಾ ಸಿಬ್ಬಂದಿ ರಕ್ಷಿಸಿದ್ದಾರೆ.

ಶಾಲೆಯಲ್ಲಿ ಪಾಠ ನಡೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವಿದ್ಯುತ್ ಸ್ಥಗಿತ ಕೊಂಡಿತ್ತು. ಈ ಹಿನ್ನಲೆಯಲ್ಲಿ ಜನರೇಟರ್ ಆನ್ ಮಾಡಿದ ವೇಳೆ ವಿದ್ಯುತ್ ಅವಘಡ ಸಂಭವಿಸಿದೆ. ಜನರೇಟರ್ ರೂಂನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು ಬಳಿಕ ಮತ್ತೊಂದು ಕೊಠಡಿಯಲ್ಲೂ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಶಾಲಾ ಮಕ್ಕಳು ಆತಂಕಗೊಂಡಿದ್ದು ತಕ್ಷಣವೇ ಶಾಲಾ ಸಿಬ್ಬಂದಿ ಶಾಲೆಯಲ್ಲಿದ್ದ 150 ವಿದ್ಯಾರ್ಥಿಗಳನ್ನ ರಕ್ಷಣೆ ಮಾಡಿದ್ದಾರೆ. ಶಾಲೆಯ ಇನ್ನೊಂದು ಬಾಗಿಲಿನಿಂದ ಮಕ್ಕಳನ್ನ ಹೊರಗೆ ಕರೆತಂದಿದ್ದಾರೆ. ಶಾಲೆಯ ಜನರೇಟರ್ ರೂಂ ಹಾಗೂ ಒಂದು ಕೊಠಡಿಯಲ್ಲಿನ ವಸ್ತುಗಳು ಬೆಂಕಿಗಾಹುತಿಯಾಗಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯಿಂದ ಭಾರಿ ಅವಘಡ ತಪ್ಪಿದೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ