Breaking News

ವಿದ್ಯುತ್ ದರ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ಖಂಡಿಸಿ ಬಿಜೆಪಿ ಪ್ರತಿಭಟನೆ

Spread the love

ಬೆಂಗಳೂರು, ಜೂ.6- ವಿದ್ಯುತ್ ದರ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ ವಿರೋಧಿಸಿ ವಿರೋಧ ಪಕ್ಷ ಬಿಜೆಪಿ ಬೀದಿಗಿಳಿದು ಹೋರಾಟ ನಡೆದಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಮತ್ತು ನಗರದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿ ಕಾರ್ಯಕರ್ತರು, ಪದಾಕಾರಿಗಳು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಬಿಜೆಪಿ ಸರ್ಕಾರವಿದ್ದಾಗ ಹಾಲಿಗೆ ರೈತರಿಗೆ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್‍ಗೆ 5 ರೂ. ನೀಡಲಾಗುತ್ತಿತ್ತು. ಇದೀಗ ಬಂದಿರುವ ಕಾಂಗ್ರೆಸ್ ಸರ್ಕಾರ 1.5 ರೂ. ಕಡಿತ ಮಾಡಿದೆ. ಇದರಿಂದ ಬಡ ರೈತರಿಗೆ ತೊಂದರೆಯಾಗಲಿದೆ. ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ಹಾಲಿನ ಪ್ರೋತ್ಸಾಹಧನ ಕಡಿಮೆ ಮಾಡದಿರಲು ಒತ್ತಾಯಿಸಿದೆ.

ಮೊನ್ನೆಯವರೆಗೂ 200 ಯುನಿಟ್‍ವರೆಗೆ ವಿದ್ಯುತ್ ಉಚಿತ ಎಂದಿದ್ದ ಸಿದ್ದರಾಮಯ್ಯ ಸರ್ಕಾರ, ಈಗ 80 ಯುನಿಟ್‍ವರೆಗೆ ಎಂದು ಆದೇಶ ಹೊರಡಿಸಿ ಜನವಿರೋಧಿ ನೀತಿ ಪ್ರದರ್ಶಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಆರೋಪಿಸಿದ್ದರು.


Spread the love

About Laxminews 24x7

Check Also

ಪುಲ್ವಾಮಾ ದಾಳಿಗೆ 7 ವರ್ಷ

Spread the loveಪ್ರತಿ ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ