Breaking News

ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ತೆಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ: ಸತೀಶ್‌ ಜಾರಕಿಹೊಳಿ

Spread the love

ಗೋಕಾಕ: ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ, ಸರ್ಕಾರದ ಆಡಳಿತ ಸರಿಯಾಗಿ ನಡೆಸದಿದ್ದರೆ ಅಷ್ಟೇ ಟೀಕಿಸಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಬಿಜೆಪಿಯವರಿಗೆ ಟಾಂಗ್‌ ನೀಡಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಆಂತರಿಕ ವಿಷಯಗಳ ಬಗ್ಗೆ ನಮ್ಮ ನಾಯಕರು ಸರಿಪಡಿಸುತ್ತಾರೆ, ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ತೆಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು.

ಚಕ್ರವರ್ತಿ ಸೂಲಿಬೆಲೆ ಒಬ್ಬ ಸಮಾಜದಲ್ಲಿ ಗೊಂದಲ ಸೃಷ್ಟಿಸುವ ವ್ಯಕ್ತಿ, ಪ್ರಧಾನಿ ಮೋದಿ ಹೇಳದಿರುವ ಭರವಸೆಗಳನ್ನು ಇವನೇ ಹೇಳುತ್ತಾನೆ. ಸೂಲಿಬೆಲೆ ಹೇಳಿಕೆಯಿಂದ ಸಮಾಜದಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ ಎಂದ ಅವರು, ಸಚಿವ ಎಂ.ಬಿ.ಪಾಟೀಲ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಚಿವ ಎಂ.ಬಿ.ಪಾಟೀಲ್‌ ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವ ಕೆಲಸ ಮುಂದುವರಿಸಿದರೆ ಸೂಲಿಬೆಲೆಗೆ ಜೈಲು ಕಂಬಿ ಎಣಿಸುವಂತೆ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದಾರೆ ಅಷ್ಟೇ ಎಂದರು.

ಇನ್ನು ಗೋವು ಹತ್ಯೆ ನಿಷೇಧದ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು, ಆತುರದ ನಿರ್ಧಾರದಿಂದ ಸಮಸ್ಯೆಗಳು ಉದ್ಬವಿಸಬಾರದು ಎಂದು ತಿಳಿಸಿದ ಅವರು, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಸಲಾಗುವುದು. ಅಕ್ರಮದಲ್ಲಿ ಸ್ಥಳೀಯ ಶಾಸಕರ ಹಸ್ತಕ್ಷೇಪ ಮಾಡಿದ್ದಾರೆ. ಅಧಿಕಾರಿಗಳು ಸೂಕ್ತ ದಾಖಲೆ ನೀಡಿದರೇ ಖಂಡಿತವಾಗಿಯೂ ಕ್ರಮ ಕೈಗೊಳ್ಳಲಾಗುವುದು. ಸರಿಯಾಗಿ ಕಾರ್ಯ ನಿರ್ವಹಿಸದ ಅಧಿಕಾರಗಳಿಗೆ ನಮ್ಮ ಜಿಲ್ಲೆಯಿಂದ ಗೇಟ್‌ ಪಾಸ್‌ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು


Spread the love

About Laxminews 24x7

Check Also

ಆಪರೇಷನ್ ಸಿಂಧೂರ್ ನಡೆಸುತ್ತಿರುವ ಯೋಧರಿಗೆ ಬೆಂಬಲ… ರಾಜ್ಯ ಕಾಂಗ್ರೆಸ್’ನಿಂದ ಬೃಹತ್ “ತಿರಂಗಾ ರ್ಯಾಲಿ”

Spread the love ಆಪರೇಷನ್ ಸಿಂಧೂರ್ ನಡೆಸುತ್ತಿರುವ ಯೋಧರಿಗೆ ಬೆಂಬಲ… ರಾಜ್ಯ ಕಾಂಗ್ರೆಸ್’ನಿಂದ ಬೃಹತ್ “ತಿರಂಗಾ ರ್ಯಾಲಿ” ಪೆಹಲ್’ಗಾಮ್’ನಲ್ಲಿ ಉಗ್ರರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ