Breaking News

ರಾಜ್ಯದಲ್ಲಿನ ಜನರಿಗೂ ಕೊರೊನಾ ಲಸಿಕೆ ಉಚಿತವಾಗಿ  ನೀಡಲಾಗುವುದು:ಡಾ. ಅಶ್ವತ್ಥ್ ನಾರಾಯಣ  

Spread the love

ಬೆಳಗಾವಿ: ರಾಜ್ಯದಲ್ಲಿನ ಜನರಿಗೂ ಕೊರೊನಾ ಲಸಿಕೆ ಉಚಿತವಾಗಿ  ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ   ಹೇಳಿದರು

ಇಲ್ಲಿನ  ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ, ಬಿಹಾರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಉಚಿತ ಕೊರೊನಾ ಲಸಿಕೆ ನೀಡುವುದಾಗಿ  ಹೇಳಿದ ಹಣಕಾಸು  ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ಸಮರ್ಥಿಸಿಕೊಂಡರು.

ಬಿಹಾರದಲ್ಲಿ  ಲಸಿಕೆ ಕೊಡಲು  ನಾವು ಸಿದ್ಧರಿದ್ದೇವೆ ಎಂದು ಆಶ್ವಾಸನೆ ನೀಡಿದ್ದೇವೆ.  ಅದರಲ್ಲಿ ತಪ್ಪೇನಿಲ್ಲ. ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸವನ್ನು ಮಾಡಿದ್ದೇವೆ ಎಂದರು.

ರಾಜ್ಯದಲ್ಲಿ ಸದ್ಯ ಎಲ್ಲ ರೀತಿಯ ವೈದ್ಯಕೀಯ  ಸೌಲಭ್ಯವನ್ನು ಸರ್ಕಾರದಿಂದ ಉಚಿತವಾಗಿ ನೀಡಲಾಗುತ್ತಿದೆ. ಅದರಂತೆ ಕೊರೊನಾ ಲಸಿಕೆ ಸಿದ್ದವಾದ ಬಳಿಕ ಅದನ್ನು  ಉಚಿತವಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ