ಹಾಸನ : ಮಧ್ಯಾಹ್ನದ ಊಟ ಸೇವಿಸಿದ ಬಳಿಕ 35 ಸೈನಿಕರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಡುಗರವಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ.
ಅಸ್ವಸ್ಥಗೊಂಡ 35 ಮಂದಿ ಯೋಧರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹುಡುಗರ ಕ್ಯಾಂಪ್ನಲ್ಲಿರುವ ವಾಹನ ಚಾಲನಾ ತರಬೇತಿಯ ಸೈನಿಕರು ಇಂದು ಮಧ್ಯಾಹ್ನ ಎಂದಿನಂತೆ ಊಟ ಸೇವಿಸಿದ್ದರು. ಕೆಲ ಹೊತ್ತಿನ ಬಳಿಕ ಸುಮಾರು 35 ಮಂದಿ ಯೋಧರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದೆ. ತಕ್ಷಣ ಇವರನ್ನು ಸಕಲೇಶಪುರದ ಗ್ರಾಫರ್ಡ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.