Breaking News

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅರ್ಜಿ ನಮೂನೆ ಬಿಡುಗಡೆ

Spread the love

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅರ್ಜಿ ನಮೂನೆ ಬಿಡುಗಡೆ ಮಾಡಿದೆ.

ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಜೂನ್ 15ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅರ್ಜಿ ನಮೂನೆ ಬಿಡುಗಡೆ ಮಾಡಿದ್ದು, ಅರ್ಜಿ ಯಾವ ರೀತಿಯಾಗಿರಲಿದೆ? ಯಾವೆಲ್ಲ ದಾಖಲೆಗಳ ಅಗತ್ಯವಿದೆ ಎಂಬ ಬಗ್ಗೆ ಅರ್ಜಿಯಲ್ಲಿ ಸ್ಪಷ್ಟ ಚಿತ್ರಣವಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರವಿರುವ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ.

ಈ ಫಾರ್ಮ್ ನಲ್ಲಿ 8 ಕಾಲಂಗಳನ್ನು ನೀಡಲಾಗಿದೆ. ಮನೆಯೊಡತಿಯ ಹೆಸರು, ಬ್ಯಾಂಕ್ ಖಾತೆ ನಂಬರ್, ಆಧಾರ್ ಸಂಖ್ಯೆ, ನಮೂದಿಸುವುದು ಕಡ್ಡಾಯವಾಗಿದೆ. ಇದಲ್ಲದೆ ಜಾತಿ, ಉದ್ಯೋಗ, ಮೊಬೈಲ್ ಸಂಖ್ಯೆ, ಗಂಡ ಅಥವಾ ಅವಲಂಭಿತರ ಬ್ಯಾಂಕ್ ಖಾತೆ, ಆಧಾರ್ ಸಂಖ್ಯೆ ಹಾಗೂ ಅಗತ್ಯ ಮಾಹಿತಿ ನಮೂದಿಸಬೇಕಿದೆ.


Spread the love

About Laxminews 24x7

Check Also

ಪತಿಯನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದ ಪತ್ನಿ ಹಾಗೂ ಕೊಲೆ ಮಾಡಲು ಯತ್ನಿಸಿದ್ದ ಆರೋಪಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ

Spread the loveಕಾರವಾರ: ದಾಂಡೇಲಿ ಸಮೀಪದ ಅಂಬೇವಾಡಿ ಗಾಂವಠಾಣ ನಿವಾಸಿ ಅಂಕುಶ್​ ಸುತಾರ ಅವರ ಕೊಲೆಗೆ ಸುಪಾರಿ ಕೊಟ್ಟಿದ್ದ ಪ್ರಕರಣದಲ್ಲಿ ಅಂಕುಶ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ