Breaking News
Home / ರಾಜಕೀಯ / ಕುಡಿಯುವ ನೀರಿನ ಸಮಸ್ಯೆಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ

ಕುಡಿಯುವ ನೀರಿನ ಸಮಸ್ಯೆಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ

Spread the love

ಚಿಕ್ಕೋಡಿ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನಲೆಯಲ್ಲಿ ಮಹಿಳೆಯರು ಪುರಸಭೆ ಎದುರು ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಒಂದು ತಿಂಗಳೊಳಗೆ ಸಮರ್ಪಕ ನೀರು ಪೂರೈಕೆ ಆಗದಿದ್ದರೆ ಚಿಕ್ಕೋಡಿ ಬಂದ್ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆಯನ್ನು ನೀಡಿದರು.

ಚಿಕ್ಕೋಡಿ ಪುರಸಭೆ ಎದುರು ಮಹಿಳೆಯರು ಹಾಗೂ ಕಾಂಗ್ರೆಸನ ಸದಸ್ಯರು ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ಪ್ರಮೀಳಾ ದೇಶಪಾಂಡೆ ಅವರಿಗೆ ಮನವಿಯನ್ನು ನೀಡಲಾಯಿತು. ಕಳೆದ ತಿಂಗಳಿನಿಂದ ಚಿಕ್ಕೋಡಿ ಪಟ್ಟಣದ ಎಲ್ಲ ವಾರ್ಡ್‌ಗಳಲ್ಲಿ ಎಂಟು ದಿನಕ್ಕೊಮ್ಮೆ ನೀರು ಬರುತ್ತಿದೆ.. ಆಗಾಗ ಮಧ್ಯರಾತ್ರಿ 2 ಗಂಟೆಗೆ ನೀರು ಬಿಡಲಾಗುತ್ತಿದೆ. ಇದರಿಂದ ನೀರಿನ ಸಮಸ್ಯೆ ಗಂಭೀರವಾಗಿದೆ. ಈ ಬಗ್ಗೆ ಪುರಸಭೆ ಗಮನಕ್ಕೆ ‌ತಂದರೂ ಪ್ರಯೋಜನೆವಾಗಿಲ್ಲ. ಪಟ್ಟಣದಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದರು. ಈ ವೇಳೆ ಮಹಿಳೆಯರು ತಲೆ ಮೇಲೆ ಕೊಡಗಳನ್ನು ಇಟ್ಟುಕೊಂಡು ಎಸಿ ಮಾಧವ ಗಿತ್ತೆ ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದರು.ಆದರೆ ಎಸಿ ಮಾಧವ್ ಗಿತ್ತೆ ಹೊರಗಡೆ ಇದ್ದ ಕಾರಣ ಗ್ರೇಡ್ 2 ತಹಸೀಲ್ದಾರ್ ಪ್ರಮೀಳಾ ಮನವಿ ಸ್ವೀಕರಿಸಿದರು.ಈ ವೇಳೆ ಮಹಿಳೆಯರು‌ ಪ್ರೇಮಿಳಾ ದೇಶಪಾಂಡೆ ಹಾಗೂ ಪುರಸಭೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಅಧಿಕಾರಿಗಳು ಒಂದು ತಿಂಗಳ ಕಾಲಾವಕಾಶ ಕೇಳಿ ನೀರಿನ ಸಮಸ್ಯೆ ಬಗೆಹರಿಸಿ, ಜೊತೆಗೆ ಚರಂಡಿ ಸ್ವಚ್ಛಗೊಳಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂದಕ್ಕೆ ಪಡೆದುಕೊಳ್ಳಲಾಯಿತು.

ಇದೇ ಸಂಧರ್ಭದಲ್ಲಿ ಪುರಸಭೆ ಸದಸ್ಯ ಸಾಬೀರ್ ಜಮಾದಾರ ಮಾತನಾಡಿ ಚಿಕ್ಕೋಡಿ ಪಟ್ಟಣದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ.ಇದರಿಂದ ಜನರು ದೊಡ್ಡ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಹಲವು ಬಾರಿ ಹೇಳಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ಕೆಲ ಗಣ್ಯರು ವಾರ್ಡ್ ಗಳಲ್ಲಿ ನೀರು ಸರಬರಾಜು ಸರಾಗವಾಗಿ ಮಾಡುತ್ತಿರುವುದು ತಪ್ಪು. ಇಡೀ ನಗರಕ್ಕೆ ನೀರು ಪೂರೈಕೆ ಸರಾಗವಾಗಬೇಕು ಎಂದು ಆಗ್ರಹಿಸಿದರು.

ಹಿರಿಯ ಪುರಸಭೆ ಸದಸ್ಯ ರಾಮ ಮಾನೆ, ಗುಲಾಬ ಹುಸೇನ ಬಾಗವಾನ ಮಾತನಾಡಿ ಚಿಕ್ಕೋಡಿ ಪಟ್ಟಣದಲ್ಲಿ ಕಳೆದ ಹಲವಾರು ದಿನಗಳಿಂದ ಕುಡಿಯುವ ‌ನೀರಿನ ಸಮಸ್ಯೆ ತಲೆದೂರಿದೆ.ಈ ಸಮಸ್ಯೆ ಬಗೆಹರಿಯದೇ ಇದ್ದಲಿ ಉಗ್ರವಾದ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ