ಧಾರವಾಡ: ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಬೇಲೂರಿನಲ್ಲಿ ನಡೆದಿದೆ.
ಶಿಬಾರಗಟ್ಟಿ ಗ್ರಾಮದ ನಿಜಗುಣಿ ಗಿರಿಯಪ್ಪನವರ (28) ಎಂಬುವವರೇ ಸಾವಿಗೀಡಾದ ಲೈನ್‌ಮ್ಯಾನ್.
ಇಂದು ಬೇಲೂರಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಿಜಗುಣಿ ಅವರಿಗೆ ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿದ್ದಾರೆ.
ಸದ್ಯ ನಿಜಗುಣಿ ಅವರ ಶವವನ್ನು ಧಾರವಾಡ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಗರಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Laxmi News 24×7