ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮತ್ತು ಸ್ಟೇಟಸ್ ಹಾಕುವ ಮೂಲಕ ಶಾಂತಿ ಕದಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಎಸ್ಪಿ ಸಂಜೀವ್ ಪಾಟೀಲ್ ಎಚ್ಚರಿಸಿದ್ದಾರೆ.
ಇಂದು ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಶಾಂತಿ ಸಮಿತಿ ಸಭೆ ನಡೆಸುವಂತೆ ಎಸ್ಪಿ ಸಂಜೀವ್ ಪಾಟೀಲ್ ಸೂಚನೆ ನೀಡಿದರು.ಈ ನಿಟ್ಟಿನಲ್ಲಿ ಅವರು ಎಲ್ಲ ಮುಖಂಡರಿಗೂ ಈ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಇಂತಹ ಪ್ರಕರಣದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಇಂದು ಎಲ್ಲ ಪೊಲೀಸ್ ಠಾಣೆಗಳಲ್ಲಿ ಶಾಂತಿ ಸಮಿತಿ ಸಭೆ ನಡೆಸಿದ್ದೇವೆ. ಯಾವುದೇ ಯುವಕರು ಎರಡು ಸಮುದಾಯಗಳ ನಡುವೆ ಬಿರುಕು ಮೂಡಿಸಲು ಇಂಟರ್ನೆಟ್ ಬಳಸಬಾರದು ಎಂದು ಒತ್ತಾಯಿಸಿದರು.
Laxmi News 24×7