Breaking News

M.B.ಪಾಟೀಲ್‌ಗೆ ಪಿತ್ತ ನೆತ್ತಿಗೇರಿದೆ ಪ್ರಹ್ಲಾದ್‌ ಜೋಶಿ

Spread the love

ಧಾರವಾಡ : ಎಂಬಿ ಪಾಟೀಲ್‌ಗೆ ಪಿತ್ತ ನೆತ್ತಿಗೇರಿದೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಚಕ್ರವರ್ತಿ ಸೂಲಿಬೆಲೆ ಬಗ್ಗೆ ಸಚಿವ ಎಂಬಿ ಪಾಟೀಲ್ ಹಗುರವಾಗಿ ಮಾತನಾಡಿರುವುದು ಸರಿಯಲ್ಲ. ಕೂಡಲೇ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕೇಂದ್ರದಲ್ಲಿ ನಮ್ಮ ಸರಕಾರವಿದ್ದರೂ ನಾವು ಸಂಯಮದಿಂದ ವರ್ತಿಸಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಟೀಕೆ-ಟಿಪ್ಪಣೆಗಳು ಸಹಜ. ಇವರು ಮಾಡುತ್ತಿರುವುದನ್ನು ನೋಡಿ ಹಿಟ್ಲರ್ ಸರ್ಕಾರ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಅಷ್ಟಕ್ಕೇ ಜೈಲಿಗೆ ಹಾಕುತ್ತೇವೆ ಎಂದರೆ ಹೇಗೆ? ಇದು ದಾರ್ಷ್ಟ್ಯ, ದುರಹಂಕಾರದ ಮಾತು ಅಲ್ಲವೇ. ಇವರಿಗೆ ಪಿತ್ತ ನೆತ್ತಿಗೆ ಏರಿದ್ದು, ಅದಕ್ಕಾಗಿ ಹೀಗೆ ಮಾತನಾಡುತ್ತಿದ್ದಾರೆ. ಇದಕ್ಕೆ ಜನರು ಉತ್ತರ ಕೊಡುತ್ತಾರೆ. ಅಧಿಕಾರದ ದುರಹಂಕಾರ ಬಂದಾಗ ಹೀಗಾಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹೊಸ ಹೊಸ ಷರತ್ತುಗಳನ್ನು ಹಾಕುತ್ತಿದೆ. ಗೃಹಲಕ್ಷ್ಮೀ ಯೋಜನೆಗೂ ಹೊಸ ಕಂಡಿಷನ್‌ ಹಾಕಿದ್ದಾರೆ. ಈ ಮೂಲಕ ಯಾರಿಗೂ ಯೋಜನೆ ಸಿಗದಂತೆ ಮಾಡುವ ಹುನ್ನಾರ ನಡೆಯುತ್ತಿದೆ. ಎಲ್ಲವೂ ಗೊಂದಲಮಯವಾಗಿದೆ. ಎಲ್ಲ ಗ್ಯಾರಂಟಿಗಳಲ್ಲಿಯೂ ಪ್ರಮುಖ ನೆಪ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾನು ಸ್ಪಷ್ಟವಾಗಿ ಹೇಳುತ್ತೇನೆ. ಹತ್ತು ಕೆಜಿ ಅಕ್ಕಿಯಲ್ಲಿ ಐದು ಕೆಜಿಯನ್ನು ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆಯಡಿ ನೀಡುತ್ತಿದೆ. ಅದನ್ನು ಸ್ಪಷ್ಟವಾಗಿ ಜನರ ಬಳಿ ಹೇಳಿ. ಇಲ್ಲವಾದರೇ ಕೇಂದ್ರ ಸರ್ಕಾರ ನೀಡುವ ಅಕ್ಕಿ ಬೇಡ ಎಂದು ಹೇಳಿ. ಇಲ್ಲದಿದ್ದರೆ ಜನರಿಗೆ 15 ಕೆಜಿ ಅಕ್ಕಿ ಕೊಡಿ, ಈ ರೀತಿ ಸುಳ್ಳು ಹೇಳಬೇಡಿ. ಪ್ರತಿಯೊಂದರಲ್ಲೂ ಸುಳ್ಳು ಹೇಳಿ ಜನರ ದಾರಿ ತಪ್ಪಿಸಿದ್ದಾರೆ ಎಂದರು.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ