Breaking News

ಜುಲೈ 3 ರಿಂದ 14 ರವರೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ

Spread the love

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಅಧಿವೇಶನ ಜುಲೈ 3 ರಿಂದ 14 ರವರೆಗೆ ನಡೆಯಲಿದೆ.

ಜುಲೈ 3 ರಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

 

ನಂತರ ಜುಲೈ 5 ರಿಂದ 7 ರವರೆಗೆ ಕಲಾಪ ನಡೆಯಲಿದೆ. ಜು.8 ಮತ್ತು 9 ರಂದು ಸರ್ಕಾರಿ ರಜೆ ಇದ್ದು, 10 ರಿಂದ 14 ರವರೆಗೆ ಕಲಾಪ ನಡೆಯಲಿದೆ. ಜಂಟಿ ಅಧಿವೇಶನದಲ್ಲಿ ಕಾಂಗ್ರೆಸ್‌ನ ಗ್ಯಾರಂಟಿಗಳ ಬಗ್ಗೆ ಮತ್ತು ಸರ್ಕಾರದ ಮುಂದಾಲೋಚನೆಗಳ ಕುರಿತು, ಕೈಗೊಳ್ಳುವ ಕಾರ್ಯಕ್ರಮಗಳ ಬಗ್ಗೆ ರಾಜ್ಯಪಾಲರಿಂದ ಓದಿಸಲಾಗುತ್ತದೆ.

 

ಜುಲೈ 7 ರಂದು ಬಜೆಟ್ ಮಂಡನೆ: ಜು.7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಗ್ಗೆ ಇತ್ತೀಚೆಗೆ ಸಿದ್ದರಾಮಯ್ಯ ಅವರೇ ಮಾಹಿತಿ ನೀಡಿದ್ದರು. ಜಂಟಿ ಅಧಿವೇಶನ ಆರಂಭದ ಬಳಿಕ ಮೂರು ದಿನ ರಾಜ್ಯಪಾಲರ ಮೇಲಿನ ಚರ್ಚೆ ನಡೆಯಲಿದ್ದು, ನಂತರ ಮುಖ್ಯಮಂತ್ರಿಗಳು ಉತ್ತರ ನೀಡಲಿದ್ದಾರೆ. 7 ರಂದು ಬಜೆಟ್ ಮಂಡಿಸಿದ ಬಳಿಕ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ