ತುಮಕೂರು: ಕೊರೊನಾ ಪ್ರಕರಣಗಳು ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗುತ್ತಿವೆ. ಜನ ಸಹ ಮತ್ತಷ್ಟು ನಿರ್ಲಕ್ಷ್ಯ ತೋರುತ್ತಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರ ಕಾಪಾಡುತ್ತಿಲ್ಲ. ಹೀಗೆ ಮಾಸ್ಕ್ ಹಾಕದೆ ಓಡಾಡುತ್ತಿದ್ದವರಿಗೆ ನಗರ ಸಭೆ ಸಿಬ್ಬಂದಿ ದಂಡ ವಿಧಿಸಿದ್ದು, ಇದರಿಂದ ಕೋಪಿತಗೊಂಡ ವ್ಯಕ್ತಿ ಹಲ್ಲೆ ಮಾಡಿದ್ದಾನೆ.
ಜಿಲ್ಲೆಯ ತಿಪಟೂರು ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಘಟನೆ ನಡೆದಿದ್ದು, ಮಾಸ್ಕ್ ಧರಿಸಿದ್ದಕ್ಕೆ ದಂಡ ಹಾಕುತಿದ್ದ ನಗರ ಸಭೆ ಸಿಬ್ಬಂದಿ ವೆಂಕಟೇಶ ಅವರ ಮೇಲೆ ಹಲ್ಲೆ ವ್ಯಕ್ತಿ ಹಲ್ಲೆ ಮಾಡಿದ್ದಾನೆ. ವ್ಯಕ್ತಿ ಕೃಷಿ ಮಾರುಕಟ್ಟೆಯಲ್ಲಿ ಕುಂಬಳ ಕಾಯಿ ವ್ಯಾಪಾರ ಮಾಡುತ್ತಿದ್ದು, ಈ ವೇಳೆ ಮಾಸ್ಕ್ ಧರಿಸಿರಲಿಲ್ಲ. ಇದನ್ನು ಕಂಡ ನಗರಸಭೆ ಸಿಬ್ಬಂದಿ ದಂಡ ಹಾಕಲು ಮುಂದಾಗಿದ್ದಾರೆ. ಇದರಿಂದ ಕೋಪಿತನಾದ ವ್ಯಕ್ತಿ ಹಲ್ಲೆ ಮಾಡಿದ್ದಾನೆ.ಮಾಸ್ಕ್ ಹಾಕದ್ದಕ್ಕೆ ದಂಡ ಕಟ್ಟುವ ವಿಚಾರವಾಗಿ ಇಬ್ಬರ ಮಧ್ಯೆ ಜಗಳ ನಡೆದಿದೆ. ಆಗ ವ್ಯಕ್ತಿ ಹಲ್ಲೆ ಮಾಡಿದ್ದಾನೆ. ತಿಪಟೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಕುರಿತು ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ