Breaking News

ದಾವಣಗೆರೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು

Spread the love

ದಾವಣಗೆರೆ : ಜಿಲ್ಲೆಯಜಗಳೂರು ತಾಲೂಕಿನಲ್ಲಿ ಇಂದು ಜೋರು ಮಳೆ ಸುರಿದಿದ್ದು, ಸಿಡಿಲು ಬಡಿದು ಇಬ್ಬರು ಅಸುನೀಗಿದ್ದಾರೆ. ಅಣಬೂರು ಗ್ರಾಮದಲ್ಲಿ ಘಟನೆ ನಡೆದಿದೆ.

ಗೊಲ್ಲರಹಟ್ಟಿ ಗ್ರಾಮದ ಕಾಟಲಿಂಗಪ್ಪ (42) ಹಾಗೂ ರಾಜು (32) ಮೃತರು.

ಕಾಟಲಿಂಗ ಹಾಗು ರಾಜು ಸೇರಿ ಐವರು ಕೃಷಿ ಚಟುವಟಿಕೆಗಾಗಿ ಜಮೀನಿಗೆ ತೆರಳಿದ್ದರು. ಬೆಳಗ್ಗೆಯಿಂದ ಸಂಜೆಯತನಕ ಹತ್ತಿ ಬಿತ್ತುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಹಿಂದಿರುಗಬೇಕಿತ್ತು. ಇದೇ ಸಮಯಕ್ಕೆ ಸರಿಯಾಗಿ ಮಳೆ ಆರಂಭವಾಗಿದೆ. ಮಳೆಯಿಂದ ಆಶ್ರಯ ಪಡೆಯಲು ಐವರ ಪೈಕಿ ಕಾಟಲಿಂಗಪ್ಪ ಹಾಗು ರಾಜು ಇಬ್ಬರು ಮರದಡಿ ಆಶ್ರಯ ಪಡೆಯಲು ತೆರಳಿದ್ದರು. ಇನ್ನುಳಿದ ಮೂವರು ಬೇರೆ ಮರದಡಿ ಆಶ್ರಯ ಪಡೆದಿದ್ದರು. ಈ ವೇಳೆ ಸಿಡಿಲು ಬಡಿದಿದೆ. ಕಾಟಲಿಂಗಪ್ಪ ಹಾಗು ರಾಜು ಇಬ್ಬರೂ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಂದು ಮರದಡಿ ಕೂತಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕೆ ಶಾಸಕ ಭೇಟಿ; ಸೂಕ್ತ ಪರಿಹಾರದ ಭರವಸೆ : ಈ ವಿಚಾರ ತಿಳಿದ ಶಾಸಕ ಚಿಮ್ಮನಕಟ್ಟಿ ದೇವೆಂದ್ರಪ್ಪ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಪ್ರಕೃತಿ ವಿಕೋಪದಡಿ ದೊರೆಯುವ ಪರಿಹಾರವನ್ನು ಮೃತರ ಕುಟುಂಬಕ್ಕೆ ಸಿಗುವಂತೆ ಮಾಡುತ್ತೇನೆ ಎಂದು ಭರವಸೆ ನೀಡಿದರು. ಇದರ ಜೊತೆಗೆ, ಜಗಳೂರಿನ ತಹಶಿಲ್ದಾರ್ ಕೂಡ ಆಗಮಿಸಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದರು.

ಅಥಣಿ- ಸಿಡಿಲಿಗೆ ಇಬ್ಬರು ಬಲಿ : ಕಳೆದ ತಿಂಗಳು ಮೇ 30 ರಂದುಬೆಳಗಾವಿ ಜಿಲ್ಲೆಯಲ್ಲಿ ಅಥಣಿ ತಾಲೂಕಿನಲ್ಲಿ ಪ್ರತ್ಯೇಕ ಗ್ರಾಮದಲ್ಲಿ ಸಿಡಿಲು ಬಡಿದು ಒಬ್ಬ ಯುವಕ, ಓರ್ವ ಮಹಿಳೆ ಮೃತಪಟ್ಟಿದ್ದರು. ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಕೆಸ್ಕರಿ ದಡ್ಡಿ ನಿವಾಸಿ ಅಮೂಲ್ ಜಯಸಿಂಗ ಕಾನಡೆ (24) ಮೃತ ದುರ್ದೈವಿ. ತೋಟದಲ್ಲಿ ಆಡುಗಳನ್ನು ಮೇಯಿಸಲು ಹೋಗಿದ್ದ ಸಮಯದಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದರು. ಮತ್ತೊಂದು ಕಡೆ ತಾಲೂಕಿನ ದೇಸಾರಹಟ್ಟಿ ಗ್ರಾಮದಲ್ಲಿ ವಿಠ್ಠಬಾಯಿ ಮಹದೇವ ಕಾಮಕರ (50) ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಡಿಯುಡಿ ಗ್ರಾಮದ ನಿವಾಸಿಯಾಗಿದ್ದು, ದೇಸಾರಹಟ್ಟಿ ಗ್ರಾಮದ ಮಗಳ ಮನೆಗೆ ಬಂದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದರು


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ