Breaking News

81ನೇ ವಯಸ್ಸಿನಲ್ಲಿ ಇಂಗ್ಲೀಷ್​ ಎಂಎ ಪರೀಕ್ಷೆ ಬರೆದ ವಿಜಯಪುರದ ವ್ಯಕ್ತಿ! ಸಾಧನೆಗೆ ಪತ್ನಿಯೇ ಪ್ರೇರಣೆಯಂತೆ

Spread the love

ವಿಜಯಪುರ: ಕಲಿಕೆಗೆ ವಯಸ್ಸಿನ ಮಿತಿ ಇರದು. ದೇಹಕ್ಕೆ ವಯಸ್ಸಾಗಬಹುದೇ ಹೊರತು ಕಲಿಕೆಯ ಆಸಕ್ತಿಗೆ ಅಲ್ಲ ಎಂಬುದನ್ನು 81 ವರ್ಷದ ಹಿರಿಯ ನಾಗರಿಕರೊಬ್ಬರು ತೋರಿಸಿ ಕೊಟ್ಟಿದ್ದಾರೆ.

ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ನರ್ಸಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ ಇಗ್ನೋ (ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯ) ಪರೀಕ್ಷೆಯಲ್ಲಿ ಎಂ.ಎ. ಇಂಗ್ಲೀಷ್ ಅಂತಿಮ ವರ್ಷದ ಪರೀಕ್ಷೆ ಬರೆಯುವ ಮೂಲಕ ನಿಂಗಯ್ಯ ಒಡೆಯರ ಗಮನ ಸೆಳೆದಿದ್ದಾರೆ. ನಿಂಗಯ್ಯ ಒಡೆಯರ ಅವರ 5ನೇ ಸ್ನಾತಕೋತ್ತರ ಪರೀಕ್ಷೆ ಇದಾಗಿದ್ದು, ಅವರಲ್ಲಿ ಓದಿನ ಬಗ್ಗೆ ಇರುವ ಹಂಬಲ ಮತ್ತು ಇಚ್ಛಾಶಕ್ತಿ, ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸುವವರಿಗೆ ಮಾದರಿಯಾಗಿದೆ.

 ಪರೀಕ್ಷೆ ಬರೆಯುತ್ತಿರುವ ನಿಂಗಯ್ಯ ಒಡೆಯರಬಾಗಲಕೋಟೆ ಜಿಲ್ಲೆಯ ಇಳಕಲ ತಾಲೂಕಿನ ಗುಡೂರು ಬಳಿಯ ಎಸ್.ಸಿ. ಹಳ್ಳಿಯವರಾಗಿರುವ ನಿಂಗಯ್ಯ ಒಡೆಯರ ಅವರಿಗೆ ಇಬ್ಬರು ಗಂಡು ಮತ್ತು ಓರ್ವ ಹೆಣ್ಣು ಮಕ್ಕಳು ಹಾಗೂ ಐದು ಜನ ಮೊಮ್ಮಕ್ಕಳಿದ್ದಾರೆ. ಆದರೆ, ಇವರ ವಿದ್ಯಾರ್ಜನೆಗೆ ಇವು ಯಾವುದೂ ಅಡ್ಡಿಯಾಗಿಲ್ಲ. ಇವರ ಮಗಳು ಕೂಡ ಪಿ.ಎಚ್.ಡಿ. ಪದವಿ ಪಡೆದಿದ್ದಾರೆ. ಇವರ ಗಂಡು ಮಕ್ಕಳು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಸರಕಾರಿ ನೌಕರಿಯಲ್ಲಿದ್ದ ಇವರು ಸೇವಾ ನಿವೃತ್ತಿಯ ನಂತರ ಮತ್ತಷ್ಟು ಕಲಿಯಬೇಕು ಎಂಬ ಹಂಬಲದಿಂದ ಈಗಾಗಲೇ ಕನ್ನಡ, ಹಿಂದಿ ಮತ್ತು ಇಂಗ್ಲಿಷ್​ ವಿಷಯಗಳಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಲ್ಲದೇ, ಇಗ್ನೋದಿಂದ ಸಮಾಜಶಾಸ್ತ್ರ ಸ್ನಾತಕೋತ್ತರ ಪದವಿಯನ್ನೂ ಪಡೆದಿದ್ದಾರೆ. ಆದರೂ ಇವರಿಗೆ ಇನ್ನೂ ಓದುವ ಮತ್ತು ಪರೀಕ್ಷೆ ಬರೆಯುವ ಹವ್ಯಾಸ ಮಾತ್ರ ಕಡಿಮೆಯಾಗದಿರುವುದು ಗಮನಾರ್ಹ ಅಂಶ.

ತಮ್ಮ ಈ ಸಾಧನೆಗೆ ತಮ್ಮ ಪತ್ನಿ ಕಾರಣ ಎಂದು ಸಂತಸದಿಂದ ಹೇಳುವ ನಿಂಗಯ್ಯ ಒಡೆಯರ, 81 ರ ಇಳಿ ವಯಸ್ಸಿನಲ್ಲಿಯೂ ಯೋಗಪಟುವಾಗಿದ್ದಾರೆ. ವಿಶಿಷ್ಟವಾದ ಸಾಹಸಗಳನ್ನು ಮಾಡುವ ಮೂಲಕವೂ ಇವರು ಮಾದರಿಯಾಗಿದ್ದಾರೆ. ಇದೀಗ ನಡೆಯುತ್ತಿರುವ ಸ್ನಾತಕೋತ್ತರ ಪರೀಕ್ಷೆಯಲ್ಲಿ ಎಲ್ಲರ ಆಕರ್ಷಣೆಯ ಕೇಂದ್ರವಾಗಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಇತರ ಅಭ್ಯರ್ಥಿಗಳಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಇಗ್ನೋ ಅಧ್ಯಯನ ಕೇಂದ್ರದ ಸಂಯೋಜಕ ಡಾ.ನಿಂಗನಗೌಡ ಪಾಟೀಲ ಹೇಳಿದ್ದಾರೆ.

 ಇಂಗ್ಲೀಷ್​ ಎಂಎ ಪರೀಕ್ಷೆವಿಶಿಷ್ಟ ದಾಖಲೆ ಬರೆದಿದ್ದ ಅಮಲಧಾರಿ: ಕಳೆದ ವರ್ಷ ಜೂನ್​ನಲ್ಲಿ ಉತ್ತರ ಪ್ರದೇಶ ವಾರಣಾಸಿಯ ನಿವಾಸಿಯೊಬ್ಬರು 84ನೇ ವರ್ಷದಲ್ಲಿ ಡಿ.ಲಿಟ್​ ಪದವಿ ಒಡೆಯುವ ಮೂಲಕ ದಾಖಲೆ ನಿರ್ಮಿಸಿದ್ದರು. 84 ವರ್ಷದ ಅಮಲಧಾರಿ ಸಿಂಗ್​ ಎನ್ನುವವರು ಬನಾರಸ್​ ಹಿಂದೂ ವಿಶ್ವವಿದ್ಯಾಲಯದಿಂದ ಡಿ.ಲಿಟ್​ ಪದವಿ ಪಡೆದು ಗಮನ ಸೆಳೆದಿದ್ದರು. ಆ ಮೂಲಕ ಡಿ.ಲಿಟ್​ ಪದವಿ ಪಡೆದ ಅತ್ಯಂತ ಹಿರಿಯ ವ್ಯಕ್ತಿ ಎನ್ನುವ ದಾಖಲೆ ನಿರ್ಮಿಸಿದ್ದರು. ಅದೇ ರೀತಿ ಕಳೆದ ವರ್ಷ ಜುಲೈನಲ್ಲಿ ಒಡಿಶಾದದ ಭುವನೇಶ್ವರದಲ್ಲಿ 58 ವರ್ಷದ ಶಾಸಕರೊಬ್ಬರು 10ನೇ ತರಗತಿ ಪರೀಕ್ಷೆ ಬರೆದು ಪಾಸ್​ ಆಗಿದ್ದರು. ಫುಲ್ಬಾನಿಯದ ಬಿಜೆಡಿ ಶಾಸಕ ಅಂಗದಾ ಕನ್ಹರ್​ 10ನೇ ತರಗತಿ ಪರೀಕ್ಷೆ ಎದುರಿಸಿ ಪಾಸ್​ ಆಗಿ ಎಲ್ಲರಿಗೂ ಮಾದರಿಯಾಗಿದ್ದರು.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ