Breaking News

ಒಂದು ವಾರದಲ್ಲಿ ಹೆಚ್ಚಿನ ವಿದ್ಯುತ ಬಿಲ್ ಹಿಂಪಡಿಯದಿದ್ದರೆ ಉಗ್ರ ಹೋರಾಟ

Spread the love

ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಬಿಲ್ ಹೆಚ್ಚಿಗೆ ಮಾಡಿರುವ ಸರಕಾರದ ನಿರ್ಧಾರವನ್ನು ಏಳು ದಿನಗಳ ಒಳಗಾಗಿ ಹಿಂಪಡೆಯಬೇಕು ಇಲ್ಲದಿದ್ದರೇ ಉಗ್ರ ಹೋರಾಟ ನಡೆಸಲಾಗುವುದು ಎಂದು ಚೇಂಬರ್ ಆಫ್ ಕಾಮಸ್೯ ಅಧ್ಯಕ್ಷ ಹೇಮೇಂದ್ರ ಪೋರವಲ ಹೇಳಿದರು.

ಸೋಮವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರಕಾರ ತಮ್ಮ ಗ್ಯಾರಂಟಿ ಯೋಜನೆಯನ್ನು ನೀಡುವ ಯೋಜನೆಯಲ್ಲಿ ಒಂದಾದ ಗೃಹ ಜ್ಯೋತಿ ಹೆಸರಿನಲ್ಲಿ ಎಲ್ಲ ಮನೆಗಳಿಗೆ 200 ಯುನಿಟ್ ಉಚಿಯ ವಿದ್ಯುತ್ ನೀಡುತ್ತಿದ್ದಾರೆ. ಆದರೆ ಕೈಗಾರಿಕಾ ಪ್ರದೇಶದ ವಿದ್ಯುತ್ ಬಿಲ್ ಹೆಚ್ಚಳ ಮಾಡಿರುವುದು ಸರಿಯಲ್ಲ ಎಂದು ದೂರಿದರು.

ಸಣ್ಣ ಕೈಗಾರಿಕೆಗಳು ಬೆಳಗಾವಿಯಲ್ಲಿ ಸಾಕಷ್ಟು ಇವೆ. ಸಾಕಷ್ಟು ಪ್ರಮಾಣದಲ್ಲಿ ವಿದ್ಯುತ್ ಬಳಕೆ ಮಾಡುತ್ತಾರೆ. ಈಗಾಗಲೇ ಬೆಳಗಾವಿ ಕೈಗಾರಿಕಾ ಕಂಪನಿಯಿಂದ ಸಾಕಷ್ಟು ತೆರೆಗೆ ತುಂಬುತ್ತಿದ್ದೇವೆ. ವಿದ್ಯುತ್ ಬಿಲ್ ಹೆಚ್ಚಳ ಮಾಡಿದರೆ ಇಲ್ಲಿನ ಕೈಗಾರಿಕೆಗಳು‌ ಮುಚ್ಚುವ ಹಂತ ಬರುತ್ತದೆ. ಇಲ್ಲವೆ, ನೆರೆಯ ರಾಜ್ಯಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಸರಕಾರ ನಮ್ಮ ಸಮಸ್ಯೆಯನ್ನು ಬಗೆ ಹರಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದರು.

ಕೈಗಾರಿಕಾ ಪ್ರದೇಶದಲ್ಲಿನ ವಿದ್ಯುತ್ ಬಿಲ್ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಕಲ್ಪಿಸಲಾಗುವುದು. ಇದಕ್ಕೂ ಸರಕಾರ ಬಗ್ಗದಿದ್ದರೇ ರಾಜ್ಯಾದ್ಯಂತ ಹೋರಾಟ ನಡೆಸಲು ಕರೆ ನೀಡಲಾಗುವುದು ಎಂದರು.

ರೋಹನ ಜೂವಳಿ, ಡಾ. ರಾಜಶೇಖರ ಆನಂದ ದೇಸಾಯಿ, ರಾಮ ಬಂಡಾರಿ, ಮಹಾದೇವ ಚೌಗುಲೆ, ದಯನಾಂದ ನೇತಲಕರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ