Breaking News

ಭೀಕರ ರಸ್ತೆ ಅಪಘಾತ : ಗ್ರಾ.ಪಂ.ಸದಸ್ಯ ಸಾವು, ಮೂವರು ಗಂಭೀರ.!

Spread the love

ಮೈಸೂರು : ಮೈಸೂರಿನ ಹುಣಸೂರು-ಮೈಸೂರು ಹೆದ್ದಾರಿಯ ಬನ್ನಿಕುಪ್ಪೆ ಸಮೀಪ ಸಾರಿಗೆ ಸಂಸ್ಥೆ ಬಸ್ ಮತ್ತು ಸ್ವಿಫ್ಟ್ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮೃತಪಟ್ಟವರು ಹುಣಸೂರು ತಾಲೂಕಿನ ತಟ್ಟೆಕೆರೆ ಗ್ರಾ.ಪಂ.ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಗ್ರಾ.ಪಂ.ಸದಸ್ಯ ಭಾಸ್ಕರ್ (42) ಎಂದು ತಿಳಿದುಬಂದಿದೆ. ಪತ್ನಿ ರಮ್ಯಾ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಾಯಗೊಂಡಿದ್ದು, ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾಸ್ಕರ್ ಅವರು ತಮ್ಮ ಕಾರಿನಲ್ಲಿ ಕುಟುಂಬ ಸಮೇತ ತಾಲೂಕಿನ ಮನುಗನಹಳ್ಳಿಯ ಮಾವನ ಮನೆಗೆ ಹೋಗಿ ವಾಪಸ್ಸಾಗುತ್ತಿದ್ದರು. ಈ ವೇಳೆ ಹೆದ್ದಾರಿಯ ಬನ್ನಿಕುಪ್ಪೆ ಬಳಿ ಪಿರಿಯಾಪಟ್ಟಣ ಡಿಪೋಗೆ ಸೇರಿದ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ.ಪರಿಣಾಮ ಭಾಸ್ಕರ್ ಸ್ಥಳದಲ್ಲೇ ಮೃತಪಟ್ಟರೆ, ಕುಟುಂಬದವರಿಗೆ ಗಂಭೀರ ಗಾಯಗಳಾಗಿವೆ. ಇನ್ನು ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳನ್ನು ಗ್ರಾಮಸ್ಥರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ