Breaking News

ರಾಜ್ಯಾದ್ಯಂತ ಮೊದಲ ದಿನವೇ 5.71 ಲಕ್ಷ ಮಹಿಳಾ ಪ್ರಯಾಣಿಕರ ಸಂಚಾರ

Spread the love

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆ ಶಕ್ತಿ ಯೋಜನೆಗೆ ಮೊದಲ ದಿನವೇ ಮಹಿಳೆಯರಿಂದ ಭರ್ಜರಿ ಸ್ಪಂದನೆ ಸಿಕ್ಕಿದೆ. ಭಾನುವಾರ ವಿಧಾನಸೌಧದಲ್ಲಿ ಚಾಲನೆ ಸಿಕ್ಕ ಶಕ್ತಿ ಗ್ಯಾರಂಟಿ ಯೋಜನೆಯನ್ನು ರಾಜ್ಯದ ಮಹಿಳೆಯರು ಖುಷಿ ಖುಷಿಯಾಗಿ ಸ್ವೀಕಾರ ಮಾಡಿದ್ದಾರೆ.

ನಿನ್ನೆ ಮಧ್ಯಾಹ್ನ 1 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಶಕ್ತಿ ಯೋಜನೆಯಡಿ ಸುಮಾರು 5 ಲಕ್ಷದ 71 ಸಾವಿರಕ್ಕೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ.

ಯೋಜನೆ ಜಾರಿಗೊಂಡ ಬೆನ್ನಲ್ಲೇ ಸಾಕಷ್ಟು ಮಹಿಳೆಯರು ಉಚಿತ ಪ್ರಯಾಣ ಸೌಲಭ್ಯದ ಲಾಭವನ್ನು ಪಡೆದುಕೊಂಡಿದ್ದಾರೆ. ಕೆಎಸ್‌ಆರ್​ಟಿಸಿ, ಬಿಎಂಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಒಟ್ಟು ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ 1.40 ಕೋಟಿ ರೂ. ಆಗಿದೆ.

ನಿನ್ನೆ ಮಧ್ಯರಾತ್ರಿವರೆಗೆ ಕೆಎಸ್​ಆರ್​ಟಿಸಿ ಯಲ್ಲಿ 1,93,83 ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಇದರಿಂದ ಕೆಎಸ್​ಆರ್​ಟಿಸಿಗೆ 58.16 ಲಕ್ಷ ರೂ. ವೆಚ್ಚ ತಗುಲಿದೆ. ಇನ್ನು ಬಿಎಂಟಿಸಿಯಲ್ಲಿ 2,01,215 ಮಹಿಳೆಯರು ಪ್ರಯಾಣ ಮಾಡಿದ್ದು, ಇದಕ್ಕೆ 26.19 ಲಕ್ಷ ರೂ. ವೆಚ್ಚವಾಗಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆಯಲ್ಲಿ 1,22,354 ಲಕ್ಷ ಮಹಿಳೆಯರು ಪ್ರಯಾಣ ಮಾಡಿದ್ದು, ಇದಕ್ಕೆ 36.16 ಲಕ್ಷ ರೂ. ವೆಚ್ಚವಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಲ್ಲಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರು 53,623, ತಗುಲಿದ ವೆಚ್ಚ 19.70 ಲಕ್ಷ ರೂ. ವಾಗಿದೆ.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ