Breaking News

ಕುಲ್ಕರ್ಣಿ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ

Spread the love

ಹುಬ್ಬಳ್ಳಿ: ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿಗೆ ದೊಡ್ಡ ಹುದ್ದೆ ಸಿಗುತ್ತಿತ್ತು ಎಂಬ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಈ ಬಗ್ಗೆ ಚರ್ಚೆ ನಡೆದಿರುವ ಕುರಿತು ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಜೋಶಿ, ದಿ.ಸುರೇಶ್ ಅಂಗಡಿಯವರಿಗೆ ಶೀಘ್ರದಲ್ಲಿಯೇ ದೊಡ್ಡ ಹುದ್ದೆ ಸಿಗುವುದರಲ್ಲಿತ್ತು ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ, ಬಿಜೆಪಿ ರಾಷ್ಟ್ರಾಧ್ಯಕ್ಷರ ಜೊತೆ ನಾನು ಸಂಪರ್ಕದಲ್ಲಿದ್ದೇನೆ. ಅಂತಹ ಚರ್ಚೆ ನಡೆದಿರುವ ಬಗ್ಗೆ ನನಗೆ ತಿಳಿದಿಲ್ಲ ಎಂದರು.

ಇದೇ ವೇಳೆ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆಯೂ ಮಾತನಾಡಿದ ಜೋಶಿ, ಕುಲ್ಕರ್ಣಿ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ