Breaking News

ಹಾವೇರಿ : ಸರ್ಕಾರಿ ಬಸ್​​ನಿಂದ ಬಿದ್ದು ಶಾಲಾ ಬಾಲಕಿ ಸಾವು

Spread the love

ಹಾವೇರಿ : ಸರ್ಕಾರಿ ಸಾರಿಗೆ ಬಸ್​​ನಿಂದ ಬಿದ್ದು ಶಾಲಾ ಬಾಲಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಬಳಿ ನಡೆದಿದೆ.

ಮೃತ ಬಾಲಕಿಯನ್ನು ಮಧು ಕುಂಬಾರ(14) ಎಂದು ಗುರುತಿಸಲಾಗಿದೆ. ಬಾಲಕಿಯು ವಾಸನ ಗ್ರಾಮದಿಂದ ಕುಸನೂರು ಗ್ರಾಮದಲ್ಲಿರುವ ಪ್ರೌಢಶಾಲೆಗೆ ಆಗಮಿಸುವ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಬಸ್​ ಜನರಿಂದ ತುಂಬಿದ್ದ ಕಾರಣಕ್ಕಾಗಿ ಬಾಲಕಿ ಬಾಗಿಲ ಬಳಿಯೇ ಬಾಲಕಿ ನಿಂತಿದ್ದಳು. ಅಲ್ಲದೆ ರಸ್ತೆ ಕೂಡ ಹದಗೆಟ್ಟಿತ್ತು ಎಂದು ಹೇಳಲಾಗಿದೆ. ಈ ವೇಳೆ ಬಾಗಿಲ ಬಳಿ ನಿಂತಿದ್ದ ಬಾಲಕಿ ಆಯತಪ್ಪಿ ಕೆಳ ಬಿದ್ದು ಸಾವನ್ನಪ್ಪಿದ್ದಾಳೆ. ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಹಾವೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮೃತ ಬಾಲಕಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಘಟನೆ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುವುದು ಎಂದು ಮೃತ ಬಾಲಕಿಯ‌ ಸಂಬಂಧಿಕರು ತಿಳಿಸಿದ್ದಾರೆ.

 


Spread the love

About Laxminews 24x7

Check Also

ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – 4 ಲಕ್ಷ ರೂ. ಮೌಲ್ಯದ ಜೋಳ ಸುಟ್ಟು ಭಸ್ಮ

Spread the love ಹಾವೇರಿ: 8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ  ರಾಶಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಮೆಕ್ಕೆಜೋಳದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ