ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ವಿಚಾರ ಸಂಬಂಧ, ಇಂದು ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವ ಮೂಲಕ, ತಾತ್ಕಾಲಿಕ ರಿಲೀಫ್ ಅನ್ನು ಡಿಕೆಶಿಗೆ ನೀಡಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಿಬಿಐ ತನಿಖೆಗೆ ತಡೆ ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠಕ್ಕೆ ಏಕ ಸದಸ್ಯ ಪೀಠ ವಜಾಗೊಳಿಸಿತ್ತು.
ಈ ಸಂಬಂಧ ಹೈಕೋರ್ಟ್ ಮತ್ತೊಂದು ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದಂತ ಹೈಕೋರ್ಟ್ ನ ವಿಭಾಗೀಯ ಪೀಠವು, ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ.
ಅಂದಹಾಗೇ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಭ್ರಷ್ಟಾಚಾರ ಪ್ರಕರಣದ ಸಿಬಿಐ ತನಿಖೆಗೆ ಫೆಬ್ರವರಿ 10ರಂದು ಕರ್ನಾಟಕ ಹೈಕೋರ್ಟ್ ತಡೆ ನೀಡಿತ್ತು. ಇದರ ಬಳಿಕ ಅನೇಕ ಬಾರಿ ತಡೆಯಾಜ್ಞೆಯನ್ನು ವಿಸ್ತರಿಸಿತ್ತು.
ಈ ನಡುವೆ ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಸಂಬಂಧ ತನಿಖೆ ನಡೆಸಲು ಈ ಹಿಂದಿನ ಸರ್ಕಾರ ಸಿಬಿಐ ಸಲ್ಲಿಸಿದ್ದಂತ ಅರ್ಜಿಗೆ ಸಮ್ಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠಕ್ಕೆ ಸಲ್ಲಿಸಿದ್ದಂತ ಅರ್ಜಿಯನ್ನು ವಜಾಗೊಳಿಸಿತ್ತು. ಮತ್ತೆ ಮೇಲ್ಮನವಿ ಸಲ್ಲಿಸಿದ್ದರು. ಈ ಬಳಿಕ ಇಂದು ಏಕ ಸದಸ್ಯ ನ್ಯಾಯಪೀಠದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ.