ಬೆಂಗಳೂರು: ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ಮಾಡುವ ಮೂಲಕ ವಾಹನ ಸಂಚಾರ ಮತ್ತು ಕಾನೂನು ಸುವ್ಯವಸ್ತೆಗೆ ಅಡ್ಡಿ ಪಡಿಸಿದ್ದ ಆರೋಪದಲ್ಲಿ ದಾಖಲಾಗಿದ್ದ ದೂರಿನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ಮುಖಂಡರಿಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಕೆ.ಎಸ್.ಈಶ್ವರಪ್ಪ ವಿರುದ್ಧ ಭ್ರಷ್ಟಚಾರದ ಆರೋಪ ಎದುರಾಗಿದ್ದ ಸಂದರ್ಭದಲ್ಲಿ ಈಶ್ವರಪ್ಪ ರಾಜೀನಾಮಗೆ ಆಗ್ರಹಿಸಿ ಕಾಂಗ್ರೆಸ್‌ನ ಹಲವು ಮುಖಂಡರು ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಮೆರವಣಿಗೆ ಮೂಲಕ ಮುಂದಾಗಿದ್ದರು.
ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಪ್ರಕರಣದ ಎಲ್ಲ ಆರೋಪಿಗಳಿಗೂ ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಜುಲೈ 28ಕ್ಕೆ ನಿಗದಿ ಪಡಿಸಿದೆ