Breaking News
Home / ಜಿಲ್ಲೆ / ಬೆಂಗಳೂರು / ಇಂಧನ ಸಚಿವರ ಹೇಳಿಕೆ ಆಶ್ಚರ್ಯ ತಂದಿದೆ: ಎಲ್ಲರಿಗೂ 200 ಯೂನಿಟ್ ವಿದ್ಯುತ್ ಕೊಡಬೇಕೆಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗ್ರಹ

ಇಂಧನ ಸಚಿವರ ಹೇಳಿಕೆ ಆಶ್ಚರ್ಯ ತಂದಿದೆ: ಎಲ್ಲರಿಗೂ 200 ಯೂನಿಟ್ ವಿದ್ಯುತ್ ಕೊಡಬೇಕೆಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗ್ರಹ

Spread the love

ಬೆಂಗಳೂರು: ”ಇಂಧನ ಸಚಿವ ಕೆ‌ ಜೆ ಜಾರ್ಜ್ ಹೇಳಿಕೆ ಬಹಳ ಆಶ್ಚರ್ಯ ಉಂಟುಮಾಡಿದೆ” ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ”ಹೊಸದಾಗಿ ಮನೆ ಕಟ್ಟಿದವರು ಹಾಗೂ ಹೊಸ ಬಾಡಿಗೆದಾರರಿಗೆ 58 ಯೂನಿಟ್ ಉಚಿತ ಅಂತ ಹೇಳಿದ್ದಾರೆ. ಆದರೆ, ಸಿಎಂ ಸಿದ್ದರಾಮಯ್ಯ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತವೆಂದು ಹೇಳಿದ್ದಾರೆ. ನೀವು ಕೊಟ್ಟಿರುವ ಭರವಸೆ ಹಿನ್ನೆಲೆಯಲ್ಲಿ ಜನರು ನಿಮಗೆ ವೋಟ್ ಕೊಟ್ಟಿದ್ದಾರೆ. ಜನರ ನಂಬಿಕೆಗೆ ಮೋಸ ಮಾಡಬೇಡಿ.‌ ಆದರೆ ನಿನ್ನೆ ಕೆ ಜೆ ಜಾರ್ಜ್ 58 ಯೂನಿಟ್ ಉಚಿತ ವಿದ್ಯುತ್ ನೀಡ್ತಾರೆ ಎಂದು ಅವರ ಹೇಳಿಕೆ ಆಶ್ಚರ್ಯ ಉಂಟಾಗುತ್ತದೆ. ಮುಖ್ಯಮಂತ್ರಿಗಳ ಮಾತಿನ ಗೌರವ ಉಳಿಬೇಕಾದರೆ, ನೀವು ಹೇಳಿದಂತೆ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ ಕೊಡಬೇಕು” ಎಂದು ಆಗ್ರಹಿಸಿದರು.

ಇನ್ನು ವಿದ್ಯುತ್ ದರ ಹೆಚ್ಚಳದಿಂದ ಸಣ್ಣ ಕೈಗಾರಿಕೆಗೆ ಬಹಳ ನಷ್ಟ ಆಗಿದೆ. ಸಣ್ಣ ಕೈಗಾರಿಕೆಗಳನ್ನು ನಿಲ್ಲಿಸುವ ವಾತಾವರಣ ನಿರ್ಮಾಣ ಆಗಿದೆ. ವಿದ್ಯುತ್ ಬೆಲೆ ಹೆಚ್ಚಳ ಕಡಿಮೆ ಮಾಡಬೇಕು. ಅಂದು ನಮ್ಮ ಸರ್ಕಾರದ‌ ಮುಂದೆ ಪ್ರಸ್ತಾಪ ಇದ್ದರೂ ನಮ್ಮ ಸರ್ಕಾರ ಒಪ್ಪಿಗೆ ಕೊಟ್ಟಿಲ್ಲ. ವಿದ್ಯುತ್ ಬೆಲೆ ಏರಿಕೆ ಪರಿಷ್ಕರಣೆ ಮಾಡುವ ಕೆಲಸ ನಿಮಗೆ ಇರುತ್ತದೆ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ವಿದ್ಯುತ್ ದರ ಏರಿಕೆ ಕುರಿತು ನಮಗೂ ಗೊಂದಲವಿದೆ- ಸತೀಶ್​ ಜಾರಕಿಹೊಳಿ‌: ಒಂದೇ ದಿನದಲ್ಲಿ ಕೈಗಾರಿಕೆಗಳು ಮಹಾರಾಷ್ಟ್ರ ರಾಜ್ಯಕ್ಕೆ ಹೋಗಲು ಸಾಧ್ಯವಿಲ್ಲ. ಮಹಾರಾಷ್ಟ್ರಕ್ಕೆ ಹೋಗಬೇಕಾದರೆ, 10 ವರ್ಷ ಸಮಯಬೇಕಾಗುತ್ತದೆ. ತಕ್ಷಣ ಹೋಗೋಕೆ ಅದೇನು ಡಬ್ಬಾ ಅಂಗಡಿ ಹಾಗೂ ಚಹಾ ಅಂಗಡಿನಾ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್​ ಜಾರಕಿಹೊಳಿ‌ ಹೇಳಿದರು. ವಿದ್ಯುತ್ ದರ ಇಳಿಕೆ ಮಾಡದಿದ್ದರೆ ಮಹಾರಾಷ್ಟ್ರಕ್ಕೆ ವಲಸೆ ಹೋಗುವುದಾಗಿ ಬೆಳಗಾವಿ ಕೈಗಾರಿಕೋದ್ಯಮಿಗಳು ನೀಡಿರುವ ಎಚ್ಚರಿಕೆ ಕುರಿತು ಅವರು ಉತ್ತರಿಸಿದರು.

ಒಂದು ಕೈಗಾರಿಕೆ ಸ್ಥಾಪನೆಯಾಗಲು 10 ವರ್ಷ ಬೇಕಾಗುತ್ತದೆ. ಅದಕ್ಕೆ ಎಷ್ಟು ಶ್ರಮ ಹಾಗೂ ಎಷ್ಟು ಹಣ ಆಗುತ್ತೆ ಮತ್ತು ಹಾಗೇ ಹೋಗಲು ಆಗುವುದಿಲ್ಲ. ವಿದ್ಯುತ್ ದರ ಏರಿಕೆ ಬಗ್ಗೆ ನಮಗೂ ಗೊಂದಲ ಇದೆ. ಮೂರು ಪಟ್ಟು ವಿದ್ಯುತ್ ಬಿಲ್ ಏರಿಕೆಯಾಗಿದೆ. ಏಕೆ ಹೆಚ್ಚಾಗಿದೆ ಎಂದು ಸಂಜೆಯೊಳಗೆ ತಿಳಿದುಕೊಂಡು ತಿಳಿಸುತ್ತೇನೆ. ಕೆಇಆರ್‌ಸಿಯವರು ಶೇಕಡಾ 10ರಷ್ಟು ಮಾತ್ರ ಹೆಚ್ಚು ಮಾಡಿದ್ದಾರೆ ಎಂದು ಅವರು ತಿಳಿಸಿದರು.

ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವೇ ಬೇರೆಯಿದೆ. ಅದಕ್ಕೂ ರಾಜಕೀಯ ಪಕ್ಷಕ್ಕೆ ಏನೂ ಸಂಬಂಧವಿಲ್ಲ. ಏ. 1ರಂದು ಆದೇಶ ಆಗಿರಬಹುದು, ಆಗ ಚುನಾವಣೆ ಹಿನ್ನೆಲೆ ಜಾರಿ ಮಾಡಿರಲಿಲ್ಲ ಅನಿಸುತ್ತದೆ. ಸದ್ಯ ಎರಡರಿಂದ ಮೂರು ತಿಂಗಳು ಸೇರಿಸಿ ವಿದ್ಯುತ್​ ಬಿಲ್​ ಕೊಟ್ಟಿರಬೇಕು ಎನ್ನುವುದು ನನ್ನ ಅಂದಾಜು ಆಗಿದೆ. ಏಪ್ರಿಲ್ ಹಾಗೂ ಮೇ ತಿಂಗಳದ್ದು ಸೇರಿಸಿ ಬಿಲ್ ಅನ್ನು ಕೊಟ್ಟಿರಬೇಕು ಎನ್ನುವುದು ನನ್ನ ಅಭಿಪ್ರಾಯ. ಈ ಕುರಿತು ನಾನು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ