ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಕ್ಷುಲ್ಲಕ ವಿಷಯಕ್ಕೆ ತವರು ಮನೆಯವರನ್ನು ಕರೆಯಿಸಿ ಅತ್ತೆ, ಗಂಡನ ಮೇಲೆ ಹಲ್ಲೆ ಮಾಡಿದ್ದು, ತೀವ್ರವಾಗಿ ಹಲ್ಲೆಗೊಳಗಾದ ಅತ್ತೆ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ.
ಮಹಾಬೂಬಿ ಯಾಕೂಶಿ (53) ಎಂಬುವವರೆ ಸಾವನ್ನಪ್ಪಿದ್ದ ದುರ್ದೈವಿ ಅತ್ತೆ.
ಕಳೆದ ಮೇ. 22ರಂದು ಸೊಸೆ ಮೇಹರೂಣಿ ಯಾಕೂಶಿ, ತನ್ನ ಇಬ್ಬರು ಸಹೋದರರ ಜೊತೆ ಸೇರಿ ಹಲ್ಲೆ ಮಾಡಿದ್ದಳು. ಈ ವೇಳೆ ರಾಡ್‌ನಿಂದ ಗಂಡ ಸುಬಾನ್ ಮತ್ತು ಅತ್ತೆ ಮಹಾಬೂಬಿ ಮೇಲೆ ಹಲ್ಲೆ ನಡೆಸಿದ್ದರು. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಇಂದು (ದಿ.13) ಮಹಾಬೂಬಿ ಸಾವನ್ನಪ್ಪಿದ್ದಾಳೆ.
ಮೂರು ವರ್ಷದ ಹಿಂದೆ ಪ್ರೀತಿಸಿ ಮೇಹರೂಣಿ ಮದುವೆಯಾಗಿದ್ದರು. ಮದುವೆಯ ಬಳಿಕ ಒಂದು ವರ್ಷ ಚೆನ್ನಾಗಿಯೇ ಇದ್ದ ಇವರ ದಾಂಪತ್ಯದಲ್ಲಿ ಬಿರುಕು ಮೂಡಿತ್ತು.
ಆ ಬಳಿಕ ಪತ್ನಿ ಮೇಹರೂಣಿ ಬೇರೆ ಮನೆ ಮಾಡುವಂತೆ ಗಂಡನಿಗೆ ಕಿರುಕುಳ ನೀಡಲು ಆರಂಭಿಸಿದ್ದಳು ಎಂದು ಹೇಳಲಾಗುತ್ತಿದೆ.