Breaking News

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ: ಮೂವರು ಸಾವು

Spread the love

ರಾಮನಗರ: ನೂತನ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ.

ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಅಪಘಾತವಾಗಿದೆ. ಮೈಸೂರಿನಿಂದ ಬೆಂಗಳೂರು ಕಡೆಗೆ ವೇಗವಾಗಿ ಸಂಚರಿಸುತ್ತಿದ್ದ ಕಾರು ಓವರ್ ಟೇಕ್ ಮಾಡಲು ಲಾರಿಯ ಹಿಂಬದಿಗೆ ಗುದ್ದಿದೆ ಎಂದು ತಿಳಿದುಬಂದಿದೆ.

ಅಪಘಾತದ ರಭಸಕ್ಕೆ ಒಂದೇ ಕುಟುಂಬದ 13 ವರ್ಷದ ಮಗು, 20 ವರ್ಷದ ಯುವತಿ ಹಾಗು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಚಾಲಕ ಸಾವನ್ನಪ್ಪಿದ್ದಾರೆ. ಹಿಂಬದಿ ಸೀಟ್​ನಲ್ಲಿ ಕುಳಿತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳಲ್ಲಿ ಒಬ್ಬರನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನಡೆಯುತ್ತಿದೆ. ಗಂಭೀರವಾಗಿ ಗಾಯಗೊಂಡ ಇನಿಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನಾ ಸ್ಥಳಕ್ಕೆ ರಾಮನಗರ ಪೊಲೀಸ್​ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೂತನ ಹೆದ್ದಾರಿಯಲ್ಲಿ ಚಾಲಕರ ಅತಿಯಾದ ವೇಗವೇ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ.


Spread the love

About Laxminews 24x7

Check Also

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಡವರ ಕೈಗೆಟುಕದ ಬಂಗಾರ: ತುಟ್ಟಿಯಾದ ಚಿನ್ನ – ಬೆಳ್ಳಿ!

Spread the loveಮಂಗಳೂರು (ದಕ್ಷಿಣ ಕನ್ನಡ): ಭಾರತದಲ್ಲಿ ಹಬ್ಬಗಳ ಋತು ಚಿನ್ನ ಮತ್ತು ಬೆಳ್ಳಿಯ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯನ್ನು ಸೃಷ್ಟಿಸುವ ಸಮಯವಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ