Breaking News
Home / ರಾಜ್ಯ / ಸೊರಬ ಪಟ್ಟಣದಲ್ಲಿ ದಿ.ಬಂಗಾರಪ್ಪ ಅವರ ಸ್ಮಾರಕ ನಿರ್ಮಿಸಲು ಈಗಾಗಲೇ 1 ಕೋಟಿ ರೂ. ಅನುದಾನ:B.S.Y.

ಸೊರಬ ಪಟ್ಟಣದಲ್ಲಿ ದಿ.ಬಂಗಾರಪ್ಪ ಅವರ ಸ್ಮಾರಕ ನಿರ್ಮಿಸಲು ಈಗಾಗಲೇ 1 ಕೋಟಿ ರೂ. ಅನುದಾನ:B.S.Y.

Spread the love

ಶಿವಮೊಗ್ಗ: ಸಮಾಜಮುಖಿ ಚಿಂತನೆಯ ನಾಯಕರಾಗಿದ್ದ ಬಂಗಾರಪ್ಪ ಅವರು ಜಾರಿಗೊಳಿಸಿದ ಜನಪರ ಹಾಗೂ ದೂರದೃಷ್ಟಿಯ ಯೋಜನೆಗಳಿಂದಾಗಿ ಇಂದಿಗೂ ಅವರು ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಅವರ 87ನೇ ಜನ್ಮಸ್ಮರಣೆ ಹಾಗೂ ಸೊರಬ ಪಟ್ಟಣದಲ್ಲಿ 21.15ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಉದ್ಯಾನವನವನ್ನು ಆನ್‍ಲೈನ್ ಸಮಾರಂಭದ ಮೂಲಕ ಉದ್ಘಾಟಿಸಿ ಮಾತನಾಡಿದ ಸಿಎಂ, ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರದಲ್ಲಿ ಬಂಗಾರಪ್ಪ ಅವರು ತಂದ ದೂರದೃಷ್ಟಿ ಯೋಜನೆಯಿಂದಾಗಿ ಅವರು ಜನಮಾನಸದಲ್ಲಿ ಇಂದಿಗೂ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಕೃಷಿ ಕಾರ್ಮಿಕರು, ರೈತರು, ದೀನ ದಲಿತರು ಮತ್ತು ಗ್ರಾಮೀಣ ಜನತೆಯ ಅಭ್ಯುದಯಕ್ಕಾಗಿ ನಿರಂತರವಾಗಿ ಶ್ರಮಿಸಿದ ಅವರು ಜನಪರ ಚಿಂತನೆಯ ನಾಯಕ ಎಂದು ಬಣ್ಣಿಸಿದರು.

ಸೊರಬ ಪಟ್ಟಣದಲ್ಲಿ ದಿ.ಬಂಗಾರಪ್ಪ ಅವರ ಸ್ಮಾರಕ ನಿರ್ಮಿಸಲು ಈಗಾಗಲೇ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ. ಸೊರಬ ಪಟ್ಟಣದಲ್ಲಿ ಉದ್ಘಾಟಿಸಲಾಗಿರುವ ಉದ್ಯಾನವನ್ನು ಪಟ್ಟಣ ಪಂಚಾಯತ್ ಆಡಳಿತ ಸರಿಯಾಗಿ ನಿರ್ವಹಣೆ ಮಾಡಬೇಕು ಎಂದು ಹೇಳಿದರು.


Spread the love

About Laxminews 24x7

Check Also

ಕಾಂಗ್ರೆಸ್‌ಗೆ ಆರೋಗ್ಯವೇ ಆಘಾತಕಾರಿ: ಆಜಾದ್ ರಾಜೀನಾಮೆ ಬಗ್ಗೆ ಬಿಜೆಪಿ ವ್ಯಂಗ್ಯ

Spread the love ಬೆಂಗಳೂರು: ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಕೆಲವೇ ಗಂಟೆಗಳಲ್ಲಿ ರಾಜೀನಾಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ