Breaking News

ಪಠ್ಯ ಪರಿಷ್ಕರಣೆ ಬಗ್ಗೆ ಬೊಮ್ಮಾಯಿ, ಸುನೀಲ್ ಕುಮಾರ್, ತೇಜಸ್ವಿ ಸೂರ್ಯ ಕಿಡಿ

Spread the love

ಬೆಂಗಳೂರು: ”ರಾಜ್ಯದಲ್ಲಿ ‌ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ್ಜಲ ಕುಸಿದಿದೆ.

ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು, ದ್ವೇಷದ ತೀರ್ಮಾನಗಳನ್ನು ತೆಗೆದುಕೊಂಡು ಸಂಕಷ್ಟದಲ್ಲಿರುವ ಕರ್ನಾಟಕದ ಜನರಿಗೆ ಈ ಸರ್ಕಾರ ಶಾಪವಾಗಿದೆ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಈ ಕುರಿತು ಟ್ಚೀಟ್ ಮಾಡಿರುವ ಅವರು, ”ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದ್ವೇಷದ ಹಾಗೂ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಹಿಂದಿನ ಸರ್ಕಾರದ ತೀರ್ಮಾನಗಳನ್ನು ರದ್ದು ಮಾಡುವುದನ್ನೇ ತನ್ನ ಸಾಧನೆ ಎನ್ನುವಂತೆ ನಡೆದುಕೊಳ್ಳುತ್ತಿದೆ. ಸಮಾಜಕ್ಕೆ ಮಾರಕವಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಮಾಡುವ ತೀರ್ಮಾನ ತೆಗೆದುಕೊಂಡು ಯಾರ ಓಲೈಕೆ ಮಾಡುತ್ತಿದೆ. ಹೈಕಮಾಂಡ್ ಹಂಗಿನಲ್ಲಿ ಅಧಿಕಾರ ನಡೆಸುತ್ತಿರುವ ಸಿದ್ದರಾಮಯ್ಯ ರಾಜ್ಯದ ಜನರ ಹಿತಾಸಕ್ತಿಗಿಂತ ಹೈಕಮಾಂಡ್ ಓಲೈಕೆಗೆ ಆದ್ಯತೆ ನೀಡುತ್ತಿರುವಂತಿದೆ” ಎಂದು ಆರೋಪಿಸಿದ್ದಾರೆ.

 

 

”ಪಠ್ಯ ಪುಸ್ತಕವನ್ನೂ ಪರಿಷ್ಕರಣೆಯ ಹೆಸರಲ್ಲಿ ರಾಷ್ಟ್ರ ಭಕ್ತ ಸಂಘಟನೆ ಸ್ಥಾಪಿಸಿ, ಎಲ್ಲರಲ್ಲೂ ದೇಶಭಕ್ತಿ ಬೆಳೆಯಲು ಕಾರಣವಾಗುವಂತಹ ಆರ್​ಎಸ್​ಎಸ್ ಸಂಘಟನೆ ಸ್ಥಾಪಿಸಿರುವ ಡಾ. ಕೇಶವ ಬಲರಾಮ್ ಹೆಡ್ಗೇವಾರ್​ ಹಾಗೂ ಸಾವರ್ಕರ್ ಅವರ ಕುರಿತ ಪಠ್ಯವನ್ನು ತೆಗೆದು ಹಾಕಲು ತೀರ್ಮಾನ ತೆಗೆದುಕೊಂಡಿರುವುದು ದೇಶದ್ರೋಹಕ್ಕೆ ಸಮಾನ” ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬೀಡಾಡಿ ದನಗಳ ಹಾವಳಿ: ತಡೆಗೆ ಮುಂದಾದ ಪುರಸಭೆ

Spread the loveಬೀಡಾಡಿ ದನಗಳ ಹಾವಳಿ: ತಡೆಗೆ ಮುಂದಾದ ಪುರಸಭೆ ಚಿಕ್ಕೋಡಿ: ಪಟ್ಟಣದ ರಸ್ತೆಗಳ ಮೇಲೆ ಬೇಕಾಬಿಟ್ಟಿಯಾಗಿ ಜಾನುವಾರುಗಳನ್ನು ಬಿಟ್ಟಿದ್ದಾರೋ, ಅವರೆಲ್ಲರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ