Breaking News

ಸರ್ಕಾರ ಮದ್ಯದ ದರ ಹೆಚ್ಚಳ ಮಾಡಿಲ್ಲ.: ಆರ್.ಬಿ.ತಿಮ್ಮಾಪೂರ್

Spread the love

ಬೆಂಗಳೂರು: ಸರ್ಕಾರ ಮದ್ಯದ ದರ ಹೆಚ್ಚಳ ಮಾಡಿಲ್ಲ.

ಯಾವುದೇ ಅಧಿಕೃತ ಆದೇಶವೂ ಆಗಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮದ್ಯದ ದರ ಹೆಚ್ಚಳ ಮಾಡುವ ಬಗ್ಗೆ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಬಂದಿಲ್ಲ. ಮದ್ಯದ ದರ ಹೆಚ್ಚಳ ಮಾಡಿದರೆ ಮಾಹಿತಿ ನೀಡುತ್ತೇನೆ ಎಂದರು.

ಅಬಕಾರಿ ಇಲಾಖೆಯಿಂದ ಯಾವುದೇ ದರ ಏರಿಕೆ ಮಾಡಿಲ್ಲ. ನನಗೆ ಮಾಹಿತಿಯೂ ಇಲ್ಲ. ದರ ಏರಿಕೆ ಇದುವರೆಗೂ ಆಗಿಲ್ಲ. ಪರಿಶೀಲನೆ ಮಾಡಿ ಹೇಳುತ್ತೇನೆ ಎಂದು ಹೇಳಿದರು. ಕಳೆದ ಒಂದು ವಾರದಿಂದ ಬಿಯರ್ ದರ 20 ರೂ. ಜಾಸ್ತಿ ಆಗಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೇಕಾದರೆ ನಾವು ರಿಯಾಲಿಟಿ ಚೆಕ್ ಮಾಡುತ್ತೇವೆ. ದರ ಏರಿಕೆ ಮಾಡಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಈಗಾಗಲೇ ಸರ್ಕಾರ ಮುಂದಿನ ವರ್ಷಕ್ಕೆ ಆದಾಯ ಟಾರ್ಗೆಟ್​ ಮಾಡಿಕೊಂಡಿದ್ದು, ಅದನ್ನು ಗಳಿಸಲು ಸರ್ಕಾರ ಹಲವು ದಾರಿಗಳನ್ನು ಕಂಡುಕೊಳ್ಳುತ್ತಿದೆ. ಸರ್ಕಾರದ ಈ ದರ ಹೆಚ್ಚಳದ ಬಗ್ಗೆ ಮದ್ಯಪ್ರಿಯರು ಹಾಗೂ ಮದ್ಯದ ಸಂಘಗಳು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಇದೀಗ ಅಬಕಾರಿ ಇಲಾಖೆ ಸಚಿವ ಆರ್.ಬಿ. ತಿಮ್ಮಾಪೂರ್​ ಅವರು ತಮ್ಮ ಸರ್ಕಾರ ಮದ್ಯದ ಬೆಲೆಯನ್ನು ಹೆಚ್ಚಳ ಮಾಡಿಲ್ಲ ಎನ್ನುವ ಸ್ಪಷ್ಟನೆ ಕೊಟ್ಟಿದ್ದಾರೆ.


Spread the love

About Laxminews 24x7

Check Also

ಗರ್ಭಿಣಿಯಾದಳೆಂದು ಪತ್ನಿಯನ್ನೇ ಕೊಲೆ ಮಾಡಿದ ಪತಿ!

Spread the loveಚಾಮರಾಜನಗರ : ಗರ್ಭಿಣಿಯೊಬ್ಬರನ್ನು ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ