Breaking News

3 ತಿಂಗಳಲ್ಲಿ ಬೆಂಗಳೂರನ್ನು ಟ್ರಾಫಿಕ್‌ ಮುಕ್ತ ಸಿಟಿ ಮಾಡಿ- ಅಧಿಕಾರಿಗಳಿಗೆ ಗೃಹ ಸಚಿವ ಜಿ.ಪರಮೇಶ್ವರ್ ಗಡುವು

Spread the love

ಬೆಂಗಳೂರು : ಬೆಂಗಳೂರು ನಗರ ಸಂಚಾರ ದಟ್ಟಣೆಯಿಂದ ವಿಶ್ವಮಟ್ಟದಲ್ಲಿ‌ ಅಪಖ್ಯಾತಿಗೆ ಒಳಗಾಗಿದೆ.

ಹೀಗಾಗಿ ನಗರ ಸಂಚಾರ ದಟ್ಟಣೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ಮೂರು ತಿಂಗಳಲ್ಲಿ ಟ್ರಾಫಿಕ್‌ಮುಕ್ತ ನಗರ ಮಾಡಲು ಅಧಿಕಾರಿಗಳಿಗೆ ತಾಕೀತು ಮಾಡಿದ್ದೇನೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಜಿ.ಪರಮೇಶ್ವರ್, ಎಸಿಪಿ ಮೇಲ್ಮಟ್ಟ ಪೊಲೀಸ್​ ಅಧಿಕಾರಿಗಳೊಂದಿಗೆ ಇಂದು ನಗರ ಪೊಲೀಸ್ ಇಲಾಖೆಯ ಕಾರ್ಯಗಳ ಬಗ್ಗೆ ಸಭೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಬೆಂಗಳೂರು ನಗರ ವಿಶ್ವಮಟ್ಟದಲ್ಲಿ ಟ್ರಾಫಿಕ್​ಗೆ ಅಪಖ್ಯಾತಿಗೆ ಒಳಗಾಗಿದೆ.‌ ಸಂಚಾರ ದಟ್ಟಣೆ ಸಂಪೂರ್ಣವಾಗಿ ಕಡಿಮೆ ಮಾಡಲು ಆಯಾ ವಿಭಾಗದ ಪೊಲೀಸರು ಪೀಕ್ ಅವರ್‌ನಲ್ಲಿ ಕಡ್ಡಾಯವಾಗಿ ಸ್ಥಳದಲ್ಲಿರಬೇಕು.‌ ಆಯಾ ವಿಭಾಗಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾದರೆ ಹಿರಿಯ ಅಧಿಕಾರಿಗಳು ಖುದ್ದು ಫೀಲ್ಡಿಗಿಳಿದು ಕೆಲಸ ಮಾಡಬೇಕು. ಸಂಚಾರ ದಟ್ಟಣೆ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್‌ ಸುಧಾರಿಸಲು ಇದೇ ಮೊದಲ ಬಾರಿಗೆ ಡ್ರೋನ್ ಕ್ಯಾಮರಾ ಬಳಸಲಾಗುತ್ತಿದೆ.

ಜನಸಂದಣಿ ಪ್ರದೇಶ ಹಾಗೂ ಟ್ರಾಫಿಕ್ ಆಗುವ ಪ್ರದೇಶಗಳಲ್ಲಿ ಸರ್ವೆಲೆನ್ಸ್‌ ಮಾಡುವುದಕ್ಕಾಗಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಡ್ರೋನ್​ಗಳನ್ನು ಬಳಸಲಾಗುತ್ತಿದೆ. ಅಲ್ಲದೆ‌ ಪೀಕ್ ಅವರ್‌ನಲ್ಲಿ‌ ಸಂಚಾರ ದಟ್ಟಣೆ ಸುಧಾರಿಸಲು ಟ್ರಾಫಿಕ್ ಪೊಲೀಸರ ಜೊತೆಗೆ ಹೆಚ್ಚುವರಿಯಾಗಿ 10 ಮಂದಿ ಕಾನೂನು ವಿಭಾಗದ ಪೊಲೀಸರು ಕಾರ್ಯನಿರ್ವಹಿಸಲು ಸೂಚಿಸಿದ್ದೇನೆ. ರಾಜಧಾನಿಯಲ್ಲಿ‌ ಸಂಚಾರ ದಟ್ಟಣೆಯ ದೂರುಗಳು ಬರದಂತೆ‌ ಕ್ರಮ ಕೈಗೊಳ್ಳಲಾಗುತ್ತಿದ್ದು ಮುಂದಿನ ಮೂರು ತಿಂಗಳಲ್ಲಿ ಟ್ರಾಫಿಕ್ ಮುಕ್ತ ಸಿಟಿ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ