Breaking News

ಕಾರು – ಕಂಟೇನರ್ ಮಧ್ಯೆ ಭೀಕರ ಅಪಘಾತ: ಇಬ್ಬರು ಸೇವಕರು ಸಾವು, ಕಾಡಸಿದ್ದೇಶ್ವರ ಸ್ವಾಮೀಜಿಗೆ ಗಾಯ

Spread the love

ಬೆಳಗಾವಿ: ಕಾರು, ಕಂಟೇನರ್‌ಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಸ್ವಾಮೀಜಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

 

ಬೆಳಗಾವಿ ತಾಲೂಕಿನ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ವಾಮೀಜಿ ಸೇವಕರಾದ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ದೇವಲವಾಡಿ ಗ್ರಾಮದ ನಿವಾಸಿ ಪಾಂಡುರಂಗ ಜಾಧವ್ (76), ಹುಕ್ಕೇರಿ ತಾಲೂಕಿನ ಕರಕನಟ್ಟಿ ಗ್ರಾಮದ ನಿವಾಸಿ ಕಾರು ಚಾಲಕ ಪಂಚಾಕ್ಷರಿ ಹಿರೇಮಠ ಮೃತಪಟ್ಟವರು.

ಹಿಂದಿನ ಬಿಜೆಪಿ ಸರ್ಕಾರದ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿತ್ತು. ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಸಂಘಟನೆಗಳು ಬೆಳಗಾವಿಯಲ್ಲಿ ಪ್ರತಿಭಟನೆ ಆಯೋಜಿಸಿದ್ದವು. ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕಾಡಸಿದ್ದೇಶ್ವರ ಸ್ವಾಮೀಜಿ ಕಾರಲ್ಲಿ ಬೆಳಗಾವಿಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಸೇವಕರಿಬ್ಬರ ಮೃತದೇಹಗಳನ್ನು ಬೀಮ್ಸ್‌ನ ಶವಾಗಾರಕ್ಕೆ ರವಾನಿಸಲಾಗಿದೆ.

ತಕ್ಷಣವೇ ಸ್ವಾಮೀಜಿಯನ್ನು ಜಿಲ್ಲಾಸ್ಪತ್ರೆಯಿಂದ ಕೆಎಲ್‌ಇ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸುತ್ತೇವೆ. ಸ್ವಾಮೀಜಿ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇವೆ. ಹಿಂದೂಪರ ಸಂಘಟನೆ ಕಾರ್ಯಕರ್ತರು ಹಣ ಕೂಡಿಸಿ ಸ್ವಾಮೀಜಿಗೆ ಚಿಕಿತ್ಸೆ ಕೊಡಿಸುತ್ತೇವೆ ಎಂದು ಬೆಳಗಾವಿಯಲ್ಲಿ ವಿಹೆಚ್‌ಪಿ ಮುಖಂಡ ಕೃಷ್ಣ ಭಟ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ