Home / ರಾಜಕೀಯ / ಮಕ್ಕಳ ಅನುಕೂಲಕ್ಕೆ ಪಠ್ಯ ಬದಲಾಯಿಸಿದರೆ ತಪ್ಪೇನು? ಗೀತಾ ಶಿವರಾಜ್​ಕುಮಾರ್

ಮಕ್ಕಳ ಅನುಕೂಲಕ್ಕೆ ಪಠ್ಯ ಬದಲಾಯಿಸಿದರೆ ತಪ್ಪೇನು? ಗೀತಾ ಶಿವರಾಜ್​ಕುಮಾರ್

Spread the love

ಮೈಸೂರು: ರಾಜ್ಯ ಸರ್ಕಾರವು ಪಠ್ಯ ಪರಿಷ್ಕರಣೆಗೆ ಮುಂದಾಗಿದ್ದು, ಮಕ್ಕಳ ಅನುಕೂಲಕ್ಕೆ ತಕ್ಕಂತೆ ಪಠ್ಯ ಬದಲಾಯಿಸಿದರೆ ಅದರಲ್ಲಿ ತಪ್ಪೇನು?

ಎಂದು ಕಾಂಗ್ರೆಸ್​ ನಾಯಕಿ ಗೀತಾ ಶಿವರಾಜ್​ಕುಮಾರ್​​ ಹೇಳಿದರು. ಈ ಮೂಲಕ ಸರ್ಕಾರದ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡರು.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಒಳ್ಳೆಯ ವಿಚಾರಗಳು ಮಾತ್ರ ಇರಬೇಕು. ಈ ಕಾರಣಕ್ಕಾಗಿ ಪಠ್ಯಪುಸ್ತಕ ಬದಲಾವಣೆ ಆದರೆ ಒಳ್ಳೆಯದು ಎಂದರು. ಒಂದೊಂದು ಸರ್ಕಾರ ಒಂದೊಂದು ರೀತಿಯಲ್ಲಿ ಪಠ್ಯ ಬದಲಾವಣೆ ಮಾಡುವ ಕ್ರಮದಿಂದ ಮಕ್ಕಳಲ್ಲಿ ಗೊಂದಲ ಆಗುವುದಿಲ್ಲವೇ? ಎಂಬ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದರು.

ನಾನು ಇಲ್ಲಿ ಈ ವಿಚಾರಗಳ ಬಗ್ಗೆ ಏನನ್ನೂ ಮಾತನಾಡುವುದಿಲ್ಲ. ಮಕ್ಕಳ ಒಳ್ಳೆಯದಕ್ಕೆ ಪಠ್ಯ ಬದಲಾವಣೆ ಮಾಡಿದರೆ ಒಳ್ಳೆಯದು ಅಲ್ಲವೇ ಎಂದು ಹೇಳಿದರು. ಬಳಿಕ ಸಿದ್ದರಾಮಯ್ಯ ಭೇಟಿ ವಿಚಾರವಾಗಿ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು ಸೌಜನ್ಯಯುತ ಭೇಟಿಯಾಗಿತ್ತು ಅಷ್ಟೇ. ಚುನಾವಣಾ ಪ್ರಚಾರದ ನಂತರ ಭೇಟಿ ಮಾಡಿರಲಿಲ್ಲ. ಈ ಕಾರಣದಿಂದ ಅವರನ್ನು ಮೊನ್ನೆ ಭೇಟಿ ಮಾಡಿದ್ದೆವು” ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಇಲ್ಲಿ ಈ ವಿಚಾರ ಮಾತನಾಡುವುದಿಲ್ಲ. ಇದು ಸೂಕ್ತ ಸ್ಥಳ ಅಲ್ಲ. ರಾಜಕೀಯ ಮಾತನಾಡಲ್ಲ. ಮುಂದೊಂದು ದಿನ ಈ ಬಗ್ಗೆ ಮಾತನಾಡುತ್ತೇನೆ” ಎಂದು ಹೇಳುವ ಮೂಲಕ ಕುತೂಹಲ ಕಾಯ್ದಿರಿಸಿಕೊಂಡರು. ಬಳಿಕ ಶಕ್ತಿಧಾಮದ ಮಕ್ಕಳೊಂದಿಗೆ ಕುಕ್ಕರಹಳ್ಳಿ ಕೆರೆಯಲ್ಲಿ ಪಕ್ಷಿ ವೀಕ್ಷಣೆ ಮಾಡಿದರು.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ