Breaking News

ಪತ್ನಿ ಹತ್ಯೆಗೆ ನಾಡ ಪಿಸ್ತೂಲು ಖರೀದಿಸಿದ್ದ ವ್ಯಕ್ತಿ

Spread the love

ಚಿಕ್ಕೋಡಿ : ಕಳೆದ 15 ದಿನಗಳ ಹಿಂದೆಯಷ್ಟೇ ಡಿವೋರ್ಸ್​ ನೀಡಿದ್ದ ವ್ಯಕ್ತಿ ವಿಚ್ಛೇದಿತ ಹೆಂಡತಿಯನ್ನು ಕೊಲೆ ಮಾಡಲು ಮಹಾರಾಷ್ಟ್ರದಲ್ಲಿ ನಾಡ ಪಿಸ್ತೂಲು ಖರೀದಿಸಿದ್ದ.

ಈ ವ್ಯಕ್ತಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತನನ್ನು ಚಿಕ್ಕೋಡಿ ಪಟ್ಟಣದ ನಿವಾಸಿ ಸಚಿನ್ ಬಾಬಾ ಸಾಹೇಬ್ ರಾಯಮಾನೆ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿ ಸಚಿನ್​​ ಕಳೆದ 15 ದಿನಗಳ ಹಿಂದೆಯಷ್ಟೇ ತನ್ನ ಪತ್ನಿ ಹರ್ಷಿತಾಗೆ ವಿಚ್ಛೇದನ ನೀಡಿದ್ದ. ತನ್ನ ಹೆಂಡತಿಗೆ ಬೇರೊಬ್ಬರ ಜೊತೆ ಸಂಬಂಧ ಇದೆ ಎಂದು ಶಂಕಿಸಿದ್ದ ಆರೋಪಿ ಪತ್ನಿಯನ್ನು ಕೊಲೆಗೈಯಲು ಸಂಚು ರೂಪಿಸಿದ್ದ ಎಂದು ತಿಳಿದುಬಂದಿದೆ.

ಆರೋಪಿಯು ತನ್ನ ಯೋಜನೆಯಂತೆ ಪತ್ನಿಯನ್ನು ಹತ್ಯೆ ಮಾಡಲು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೀರಜ್ ತಾಲೂಕಿನ ಕುಪವಾಡ ಗ್ರಾಮದಲ್ಲಿ ನಾಡ ಪಿಸ್ತೂಲ್ ಖರೀದಿ ಮಾಡಿದ್ದ.

ಬಳಿಕ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪಿಯನ್ನು ಹಿಡಿದು ವಿಚಾರಣೆ ನಡೆಸಿದ ಮೀರಜ್​ ರೈಲ್ವೆ ಪೊಲೀಸರಿಗೆ ಆರೋಪಿ ಬಳಿ ಪಿಸ್ತೂಲು​​ ಇರುವುದು ಗೊತ್ತಾಗಿದೆ.

ಬಳಿಕ ಗಾಂಧಿ ಚೌಕ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಯು ಹರ್ಷಿತಾಳನ್ನು ಹತ್ಯೆ ಮಾಡಲು ರಿವಾಲ್ವರ್ ಖರೀದಿಸಿದ್ದಾಗಿ ಹೇಳಿದ್ದಾನೆ ಎಂದು ಸಾಂಗ್ಲಿ ಎಸ್ಪಿ ಬಸವರಾಜ ತೇಲಿ ಮಾಹಿತಿ ನೀಡಿದರು.

ಇನ್ನೊಂದೆಡೆ ಆರೋಪಿ ಸಚಿನ್ ಪತ್ನಿ ಹರ್ಷಿತಾ ಕೂಡ ಚಿಕ್ಕೋಡಿ ಪೊಲೀಸರಿಗೆ ದೂರು ನೀಡಿದ್ದಾರೆ. ತನಗೆ ರಕ್ಷಣೆ ನೀಡುವಂತೆ ಹಾಗೂ ತನಗೆ ಏನಾದರೂ ತೊಂದರೆ ಆದರೆ ಅದಕ್ಕೆ ಮಾಜಿ ಪತಿ ಸಚಿನ್ ಕಾರಣ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮೀರಜ್‌ನ ಗಾಂಧಿ ಚೌಕ್ ಹಾಗೂ ಚಿಕ್ಕೋಡಿ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

 


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ