ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್​ ಪರಿಸ್ಥಿತಿ ಹೇಗಿರಲಿದೆ ಎಂದು ಕಾದು ನೋಡಿ: ವಿಜಯೇಂದ್ರ

Spread the love

ಶಿವಮೊಗ್ಗ: ಲೋಕಸಭೆಯಲ್ಲಿ ಬಿಜೆಪಿ 25 ಸ್ಥಾನ ಗೆದ್ದ ಬಳಿಕ ಕಾಂಗ್ರೆಸ್ ಪಕ್ಷದವರ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ಕಾದು ನೋಡಿ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಭರವಸೆಯಂತೆ ಎಲ್ಲರಿಗೂ 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಗರೀಬ್ ಕಲ್ಯಾಣ ಯೋಜನೆಯಡಿ 5 ಕೆ.ಜಿ ಅಕ್ಕಿ ನೀಡುತ್ತಿದ್ದಾರೆ. ಆದರೆ ಕಾಂಗ್ರೆಸ್​ನವರು ಭರವಸೆ ನೀಡಿದ್ದು 10 ಕೆಜಿ ಅಕ್ಕಿ, ಭರವಸೆಯಂತೆ ಕೇಂದ್ರದ 5 ಕೆ.ಜಿ ಹಾಗೂ ನೀವು ಹೇಳಿದ್ದ 10 ಕೆ.ಜಿ ಸೇರಿಸಿ ತಲಾ15 ಕೆ.ಜಿ ಅಕ್ಕಿ ನೀಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್​ನವರು ಕೊಟ್ಟ ಭರವಸೆ ಈಡೇರಿಸಲಿ. ನಮ್ಮ ರಾಜ್ಯದಲ್ಲೇ ಸಾಕಷ್ಟು ಗೋಧಿ, ರಾಗಿ, ಅಕ್ಕಿ ಬೆಳೆಯುತ್ತಾರೆ. ಕಾಂಗ್ರೆಸ್ ನಾಯಕರಿಗೆ ಬೇರೆ ರಾಜ್ಯದ ಮೇಲೆ ಪ್ರೀತಿ ಜಾಸ್ತಿ. ನಮ್ಮ ರಾಜ್ಯದಲ್ಲಿ ಬೆಳೆಯುವ ಅಕ್ಕಿ ಖರೀದಿಸಿದರೆ ನಮ್ಮ ರೈತರಿಗೆ ಅನುಕೂಲ ಆಗುತ್ತದೆ. ನಮ್ಮ ರಾಜ್ಯದಲ್ಲಿ ಅಕ್ಕಿ ಸಿಗಲಿಲ್ಲ ಎಂದರೆ ಬೇರೆ ರಾಜ್ಯದಿಂದ ತೆಗೆದುಕೊಂಡು ಬನ್ನಿ. ಅತೀ ಶೀಘ್ರದಲ್ಲಿ ಕೊಟ್ಟಂತಹ ಭರವಸೆ ಈಡೇರಿಸಬೇಕು. ಹೀಗಾಗಿಯೇ ಅಧಿಕಾರಕ್ಕೆ ಬಂದಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಕೊಟ್ಟ ಭರವಸೆ ಈಡೇರಿಸುತ್ತೇವೆ ಎಂದಿರುವ ಕಾಂಗ್ರೆಸ್​ನವರು, ಬಳಿಕ ಈಡೇರಿಸಲು ಸಾಧ್ಯವಾಗದೇ ಇದ್ದಾಗ ಗೋಹತ್ಯೆ, ಪಠ್ಯ ಪರಿಷ್ಕರಣೆ ವಿಷಯ ತಂದು ಎಲ್ಲರನ್ನೂ ಡೈವರ್ಟ್​ ಮಾಡುತ್ತಿದ್ದಾರೆ. ರಾಜ್ಯದ ಜನರಿಗೆ ತಪ್ಪು ಕಲ್ಪನೆ ಕೊಡುವುದರಲ್ಲಿ ಕಾಂಗ್ರೆಸ್ ಪಕ್ಷದವರು ನಿಸ್ಸೀಮರು ಎಂದು ಟೀಕಿಸಿದರು.

ಬಿಜೆಪಿ ಸರ್ಕಾರದ ಹಗರಣ ತನಿಖೆ ಮಾಡುತ್ತೇವೆ ಅಂತಾ ಸಚಿವರು ಹೇಳುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನೀವು ಯಾವುದೇ ತನಿಖೆ ನಡೆಸಿ, ತಪ್ಪು ಮಾಡಿದ್ದರೆ ಜೈಲಿಗೆ ಕಳುಹಿಸಿ. ಮೊದಲು ರಾಜ್ಯದಲ್ಲಿ ಕುಡಿಯುವ ನೀರಿನ‌ ಸಮಸ್ಯೆ ಇದೆ, ಮಳೆ ಬಂದಿಲ್ಲ. ಈ ಸಮಸ್ಯೆಗಳನ್ನು ಬಗೆಹರಿಸಿ. ಆ ಮೇಲೆ ನೀವು ಏನ್ ಬೇಕಾದರೂ ಮಾಡಿ, ನಾವು ಸ್ವಾಗತಿಸುತ್ತೇವೆ ಎಂದು ಹೇಳಿದರು.

ಉಪದೇಶ ಮಾಡುವಷ್ಟು ದೊಡ್ಡವನಲ್ಲ: ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕಾರಣ ವಿಚಾರವಾಗಿ ಪ್ರತಿಕ್ರಿಯಿಸಿ, ಅನೇಕ ಹಿರಿಯರು ಈ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಈ ಬಗ್ಗೆ ಉಪದೇಶ ಮಾಡುವಷ್ಟು ದೊಡ್ಡವನಲ್ಲ. ಪ್ರತಾಪ್ ಸಿಂಹ ಸೋಲಿಲ್ಲದ ಸರದಾರರು, ವಾಗ್ಮಿಗಳು. ನನ್ನನ್ನು ಸೇರಿದಂತೆ ನಮ್ಮ‌ ನಮ್ಮ ಜವಾಬ್ದಾರಿ ಅರಿತು ಮಾತನಾಡಬೇಕು ಎಂದರು.

ಸರ್ಕಾರ ಪತನದ ಸುಳಿವು : ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಎಂಬ ಸಚಿವ ಮಹದೇವಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಲೋಕಸಭೆ ಚುನಾವಣೆ ಆಗಲಿ. ಇದು ಡಬಲ್ ಸ್ಟೇರಿಂಗ್ ಸರ್ಕಾರ ಎಂದು ನಾನು ಮೊದಲ ದಿನವೇ ಹೇಳಿದ್ದೇನೆ. ಲೋಕಸಭೆಯಲ್ಲಿ ಬಿಜೆಪಿ 25 ಸ್ಥಾನ ಪಡೆದ ನಂತರ ಅವರ ಪರಿಸ್ಥಿತಿ ಏನಾಗುತ್ತದೆ ಕಾದು ನೋಡಿ ಎನ್ನುತ್ತ ಅಚ್ಚರಿ ಮೂಡಿಸಿದರು.


Spread the love

About Laxminews 24x7

Check Also

ಶಿವಮೊಗ್ಗದ ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Spread the love ಶಿವಮೊಗ್ಗ: ಮಲೆನಾಡು ಭಾಗದ ಬಹುಕಾಲದ ಕನಸಾದ ಶಿವಮೊಗ್ಗದ ನೂತನ ವಿಮಾನ ನಿಲ್ದಾಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ