ಬೆಳಗಾವಿ : ಕಳೆದ ಒಂದು ವಾರದಿಂದ ರಾಜ್ಯದಾದ್ಯಂತ ಆರಂಭವಾಗಿರುವ ಶಕ್ತಿ ಯೋಜನೆಗೆ ವ್ಯಾಪಕ ಸ್ಪಂದನೆ ದೊರೆಯುತ್ತಿರುವ ಜೊತೆಗೆ ಕೆಲವು ಅವಾಂತರಗಳಿಗೆ ಈ ಯೋಜನೆ ಕಾರಣವಾಗಿ ಜನರ ಕೆಂಗಣ್ಣಿಗೆ ಗುರಿಯಾಗುತ್ತಿದೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಭಾನುವಾರ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಏರುವಾಗ ಬಾಲಕಿಯೊಬ್ಬಳು ಜಾರಿ ಬಿದ್ದು ಗಾಯಗೊಂಡ ಘಟನೆ ನಡೆದಿದೆ.
ರಾಮದುರ್ಗ-ಧಾರವಾಡ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ ಪ್ರಯಾಣಿಕರಿಂದ ತುಂಬಿತ್ತು.ಬಾಲಕಿ ಕೂಡ ಅದೇ ಬಸ್ ಏರುತ್ತಿದ್ದಳು. ಈ ವೇಳೆ ಆಕೆ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ.