Breaking News

ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Spread the love

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಅಲ್ಲದೇ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.

ಕರಾವಳಿ ಭಾಗದ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, ಹಾಸನ, ಮಂಡ್ಯ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ