Breaking News

ಆಸ್ಪತ್ರೆಯಲ್ಲಿರುವ ಪತ್ನಿ ಆರೋಗ್ಯ ವಿಚಾರಿಸಿ, ದಿಲ್ಲಿಗೆ ಪ್ರಯಾಣ ಬೆಳೆಸಿದ ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ಪತ್ನಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಹಿನ್ನೆಲೆ ಅವರ ಆರೋಗ್ಯ ವಿಚಾರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರಯಾಣ ಬೆಳೆಸಿದ್ದಾರೆ.

ಪಕ್ಷದ ಹೈಕಮಾಂಡ್‌ ನಾಯಕರ ಭೇಟಿಗಾಗಿ ಸಿದ್ದರಾಮಯ್ಯ ನಿನ್ನೆಯೇ ತೆರಳಬೇಕಿತ್ತು. ಆದರೆ ನಿನ್ನೆ ವಿವಿಧ ಕಾರ್ಯಕ್ರಮ ಎದುರಾದ ಹಿನ್ನೆಲೆ ಇಂದಿಗೆ ಮುಂದೂಡಿದ್ದರು. ಬೆಳಗ್ಗೆ ಪ್ರಯಾಣ ಬೆಳೆಸಬೇಕಿತ್ತು. ಆದರೆ ತೀವ್ರ ಜ್ವರದ ಕಾರಣ ನಿನ್ನೆ ರಾತ್ರಿ ಸಿಎಂ ಪತ್ನಿ ಪಾರ್ವತಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯ ಸ್ಥಿರ.. ಸದ್ಯ ಪಾರ್ವತಿ ಅವರಿಗೆ ಎಂಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗ್ಗೆ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಆರೋಗ್ಯ ವಿಚಾರಿಸಿದರು. ಈ ಹಿನ್ನೆಲೆ ಇವರ ದಿಲ್ಲಿ ಪ್ರವಾಸ ಮಧ್ಯಾಹ್ನಕ್ಕೆ ಮುಂದೂಡಿಕೆಯಾಗಿದೆ. ವೈದ್ಯರ ಬಳಿ ಪತ್ನಿಯ ಆರೋಗ್ಯದ ಮಾಹಿತಿ ಪಡೆದ ಬಳಿಕ ಸಿದ್ದರಾಮಯ್ಯ ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ. ಪಾರ್ವತಿ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಇಂದು ಸಂಜೆ ಐಸಿಯುನಿಂದ ವಾರ್ಡ್‌ಗೆ ಸ್ಥಳಾಂತರಿಸಲಾಗುತ್ತದೆ. ಆತಂಕ ಪಡುವ ಅಗತ್ಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಪಾರ್ವತಿ ಅವರು ಜ್ವರದ ಜತೆ ತೀವ್ರ ಉಸಿರಾಟದ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಆರೋಗ್ಯ ಬಿಗಡಾಯಿಸುತ್ತಿರುವುದನ್ನು ಗಮನಿಸಿ ನಿನ್ನೆ ಸಂಜೆ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಣಿಪಾಲ್‌ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಅಲ್ಲಿಂದಲೇ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ತೆರಳಿರುವ ಸಿದ್ದರಾಮಯ್ಯ ಅವರು ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ರಾಷ್ಟ್ರಪತಿ ಸೇರಿದಂತೆ ಕೇಂದ್ರದ ವಿವಿಧ ಇಲಾಖೆ ಸಚಿವರ ಭೇಟಿ.. ರಾಷ್ಟ್ರಪತಿ, ಕೇಂದ್ರ ಸರ್ಕಾರದ ವಿವಿಧ ಇಲಾಖೆ ಸಚಿವರನ್ನು ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ. ‘ಅನ್ನಭಾಗ್ಯ’ ಅಕ್ಕಿ ವಿಚಾರವಾಗಿ ಎದುರಾಗಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಈ ಪ್ರಯಾಣ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಜತೆ ಸಚಿವರಾದ ಜಮೀರ್ ಅಹ್ಮದ್ ಖಾನ್, ಬೈರತಿ ಸುರೇಶ್‌ ಮುಂತಾದವರು ತೆರಳಿದ್ದಾರೆ.

ಚರ್ಚೆಗೆ ಗ್ರಾಸವಾಗಿರುವ ಅನ್ನಭಾಗ್ಯ ಅಕ್ಕಿ ವಿಚಾರ.. ಕಾಂಗ್ರೆಸ್​ ಪಕ್ಷ ಚುನಾವಣೆ ಪೂರ್ವದಲ್ಲಿ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಇದರಲ್ಲಿ ಅನ್ನಭಾಗ್ಯ ಯೋಜನೆಯೂ ಒಂದು.ಈಗಾಗಲೇ ಭಾರತೀಯ ಆಹಾರ ನಿಗಮವು ರಾಜ್ಯ ಸರ್ಕಾರಕ್ಕೆ ಅಕ್ಕಿಯನ್ನು ಪೂರೈಸಲು ಸಾಧ್ಯವಿಲ್ಲ ಎಂದು ಪತ್ರ ಬರೆದಿದೆ. ರಾಜ್ಯದ ಜನರಿಗೆ ಉಚಿತ ಅಕ್ಕಿ ವಿತರಿಸಲು 2.38 ಲಕ್ಷ ಮೆಟ್ರಿಕ್​ ಟನ್​ ಅಕ್ಕಿ ಅಗತ್ಯವಿದ್ದು, ಕೇಂದ್ರ ಸರ್ಕಾರ ಇದರಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್​ ನಾಯಕರು ಆರೋಪಿಸುತ್ತಿದ್ದಾರೆ.


Spread the love

About Laxminews 24x7

Check Also

ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

Spread the love ಬೆಂಗಳೂರು: ಜಾತಿ ಗಣತಿ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ) ವರದಿಯನ್ನು ಮುಂದಿನ ಸಚಿವ ಸಂಪುಟದಲ್ಲಿ ಕೈಗೆತ್ತಿಕೊಳ್ಳಲು ಸರಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ