Breaking News

ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಮಹಿಳೆ

Spread the love

ಅನಾರೋಗ್ಯದ ಕಾರಣದಿಂದ ಮಹಿಳೆಯೊಬ್ಬಳು ಮನನೊಂದು ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಯಲ್ಲಿ ನಡೆದಿದೆ.

ಬಸವ್ವ ಚಿಕ್ಕನೇರ್ತಿ ಎಂಬುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನೂ ನೆರೆಗಲ್ಲನಿಂದ ತವರು ಮನೆಯಾಗಿರುವ ಶಿರಗುಪ್ಪಿಗೆ ಬಂದಿದ್ದ ಬಸವ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸ್ ತನಿಖೆಯ ನಂತರವೇ ಆತ್ಮಹತ್ಯೆಗೆ ಖಚಿತ ಮಾಹಿತಿ ಲಭ್ಯವಾಗಬೇಕಿದೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ