ಉತ್ತರಕನ್ನಡ: ದೇವಿಮನೆ ಘಟ್ಟ ಪ್ರದೇಶದ ಕಾಡಿನಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆ ಸಂಬಂಧ ಐವರನ್ನು ಬಂಧಿಸಿದ್ದಾರೆ. ವಿಶೇಷವೆಂದರೆ ಆರೋಪಿಗಳ ಪೈಕಿ ಸಾವಿಗೀಡಾದ ಯುವತಿ ಮೂವರು ಚಿಕ್ಕಮ್ಮಂದಿರೂ ಇದ್ದಾರೆ.
ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವಿಮನೆ ಪ್ರದೇಶದಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿತ್ತು. ಪ್ರಕರಣವನ್ನು ಭೇದಿಸಿದ ಪೊಲೀಸರು ಆಕೆಯನ್ನು ಶಿಗ್ಗಾವಿ ಮೂಲದ ತನುಜಾ (26) ಎಂದು ಪತ್ತೆ ಹಚ್ಚಿದ್ದಲ್ಲದೆ, ಆರೋಪಿಗಳನ್ನೂ ಪತ್ತೆ ಹಚ್ಚಿ ಬಂಧಿಸಿದ್ದಾರೆ.
3 ಕೋಟಿ ಪ್ಯಾಕೇಜ್ ಗಿಟ್ಟಿಸಿದ ಎಲ್‌ಪಿಯು ಪದವೀಧರ!
ತನುಜಾ ಪತಿಯ ಸಹೋದರ ಮಹೇಶ್, ವಾಹನ ಚಾಲಕ ಅಮಿತ್ ಹಾಗೂ ಆಕೆಯ ಚಿಕ್ಕಮ್ಮಂದಿರಾದ ಗೌರಮ್ಮ, ನೀಲಕ್ಕ, ಕಾವ್ಯ ಬಂಧಿತ ಆರೋಪಿಗಳು. ಉತ್ತರಕನ್ನಡ ಜಿಲ್ಲೆಯ ಕುಮಟಾ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ತನುಜಾಳನ್ನು ಜೂ. 16ರಂದು ಹತ್ಯೆ ಮಾಡಿ ದೇವಿಮನೆ ಘಟ್ಟದಲ್ಲಿ ಶವವನ್ನು ಎಸೆಯಲಾಗಿತ್ತು. ಶೀಲ ಶಂಕಿಸಿ ಈ ಕೊಲೆ ಮಾಡಿರುವುದು ಪೊಲೀಸ್ ವಿಚಾರಣೆಯಲ್ಲಿ ತಿಳಿದು ಬಂದಿದೆ. ಕುತ್ತಿಗೆ ಭಾಗದಲ್ಲಿ ಗಾಯದ ಗುರುತು ಆಧರಿಸಿ ತನಿಖೆ ಕೈಗೊಂಡ ಕುಮಟಾ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.