Breaking News

ಲೈಂಗಿಕ ಕಿರುಕುಳ ; ಕ್ಷೇತ್ರ ಶಿಕ್ಷಣಾಧಿಕಾರಿಗೆ 5 ವರ್ಷ ಜೈಲು, ದಂಡ ವಿಧಿಸಿದ ಕೋರ್ಟ್.!

Spread the love

ಗದಗ : ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕೇಸ್ ಗೆ ಸಂಬಂಧಿಸಿದಂತೆ ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಶಂಕ್ರಪ್ಪ ಹಳ್ಳಿಗುಡಿ ಅವರಿಗೆ 5 ವರ್ಷ ಜೈಲು ಶಿಕ್ಷೆ ನೀಡಿ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ ಆದೇಶ ಹೊರಡಿಸಿದ್ದಾರೆ.

ಆರೋಪಿ ಶಂಕ್ರಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಎಒ) ಆಗಿದ್ದ ವೇಳೆ ವಿದ್ಯಾರ್ಥಿನಿಯ ಮನೆಗೆ ಹೋಗಿ ಲೈಂಗಿಕ ಕಿರುಕುಳ ನೀಡಿದ್ದನು.

ಪ್ರಕರಣ ಕುರಿತಂತೆ ಸಂತ್ರಸ್ತೆ ಬಾಲಕಿ 21 ಫೆಬ್ರವರಿ 2020 ರಲ್ಲಿ‌ ಕೇಸ್ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಮುಂಡರಗಿ ಪೊಲೀಸರು ತನಿಖೆ ನಡೆಸಿದ್ದರು. ನಂತರ 2020ರ ಮಾ. 27ರಂದು ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಲಯ ಶಂಕ್ರಪ್ಪಗೆ ಐದು ವರ್ಷ ಜೈಲು ಶಿಕ್ಷೆ, 25 ಸಾವಿರ ರೂಪಾಯಿ ದಂಡ ವಿಧಿಸಿದೆ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ತೆರೆ

Spread the love ಗದಗ: ಐತಿಹಾಸಿಕ ಸ್ಥಳ ಗದಗ  ಜಿಲ್ಲೆ ಲಕ್ಕುಂಡಿಯಲ್ಲಿ ನಡೆಯುತ್ತಿದ್ದ ಉತ್ಖನನ ಕಾಮಗಾರಿಗೆ ಇಂದು ತೆರೆ ಬಿದ್ದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ