Breaking News

ಬೆಳಗಾವಿಯಲ್ಲಿ ಕೈಗಾರಿಕೆಗಳು ಬಂದ್,

Spread the love

ಬೆಳಗಾವಿ: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ಹುಬ್ಬಳ್ಳಿಯ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ನೀಡಿರುವ ಬಂದ್​ಗೆ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೈಗಾರಿಕೆಗಳನ್ನು ಬಂದ್ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕೈಗಾರಿಕೋದ್ಯಮಿಗಳು ಎಲೆಕ್ಟ್ರಿಕಲ್ ಬೈಕ್ ಹೊತ್ತುಕೊಂಡು ಅಣಕು ಶವಯಾತ್ರೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆದಿದ್ದಾರೆ.

ಇಂದು ಬೆಳಗ್ಗೆ ಇಲ್ಲಿನ ಧರ್ಮವೀರ ಸಂಭಾಜಿ ವೃತ್ತ ಬಳಿ ಚೇಂಬರ್ ಆಫ್ ಕಾಮರ್ಸ್ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೇರಿದ ಜಿಲ್ಲೆಯ ಕೈಗಾರಿಕೋದ್ಯಮಿಗಳು ಲಿಂಗರಾಜ ರಸ್ತೆ, ಚನ್ನಮ್ಮ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದರು. ಇದೇ ವೇಳೆ ಎಲೆಕ್ಟ್ರಿಕಲ್ ಬೈಕ್ ಅನ್ನು ಹೆಗಲ ಮೇಲೆ ಹೊತ್ತುಕೊಂಡ ಪ್ರತಿಭಟನಾಕಾರರು ವಿದ್ಯುತ್ ದರ ಏರಿಸಿದ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ