Breaking News

ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಗೆಳೆಯನೊಂದಿಗೆ ಸೇರಿಕೊಂಡು ಪತಿಯನ್ನು ಕೊಲೆ

Spread the love

ಮದುವೆಯಾಗಿದ್ದರೂ ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಗೆಳೆಯನೊಂದಿಗೆ ಸೇರಿಕೊಂಡು ಪತಿಯನ್ನು ಕೊಲೆ ಮಾಡಿ ಕಳೆದ ಮೂರು ತಿಂಗಳ ಹಿಂದೆ ನನ್ನ ಪತಿ ಕಾಣೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿ ಈಗ ಖಾಕಿಗೆ ಲಾಕ್ ಆದ ಘಟನೆ ನಡೆದಿದೆ.

ಅನೈತಿಕ ಸಂಬಂಧ ಪ್ರಶ್ನೆ ಮಾಡಿದ ಪತಿಯನ್ನೇ ಗೆಳೆಯನೊಂದಿಗೆ ಸೇರಿಕೊಂಡು ಕೊಲೆ ಮಾಡಿ ಕಳೆದ ಮೂರು ತಿಂಗಳು ಹಿಂದೆ ನನ್ನ ಪತಿ ರಮೇಶ ಕಾಂಬಳೆ ಕಾಣೆಯಾಗಿದ್ದಾನೆ ಎಂದು ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ನಾಟಕ ಮಾಡಿದ ಪತ್ನಿಯ ಬಣ ಬಯಲಾಗಿ ಈಗ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಅತಿಥಿಯಾಗಿದ್ದಾರೆ.

ತಮ್ಮ ಅನೈತಿಕ ಸಂಬಂಧ ಪತಿಯ ಎದುರಿಗೆ ಬಯಲಿಗೆ ಬರುತ್ತಿದ್ದಂತೆ ಪತಿಯನ್ನು ಕೊಲೆ ಮಾಡಿ ಶವವನ್ನು ಬೇರೆ ಕಡೆ ಎಸೆದು ಎಪಿಎಂಸಿ ಪೊಲೀಸ್ ಠಾಣೆಗೆ ಕಳೆದ ಮೂರು ತಿಂಗಳ ಹಿಂದೆ ಸಂದ್ಯಾ ಕಾಂಬಳೆ ಕಾಣೆಯಾಗಿದ್ದಾರೆ ನನ್ನ ಪತಿ ಎಂದು ದೂರು ನೀಡಿದ್ದಳು.

ಈಗ ಕೊಲೆಯಾಗಿದೆ ಎಂದು ತಿಳಿದ ಕೂಡಲೇ ಎಪಿಎಂಸಿ ಪೊಲೀಸರು ಕಿಲಾಡಿ ಪತ್ನಿ ಸಂದ್ಯಾ, ಆಕೆಯ ಗೆಳೆಯ ಬಾಳು ಬಿರಂಜೆ ಸೇರಿದಂತೆ ಅವರಿಗೆ ಸಹಕರಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮೇಲ್ನೋಟಕ್ಕೆ ಇದು ಅನೈತಿಕ ಸಂಬಂಧದ ಕೊಲೆ ಎಂದು ಶಂಕಿಸಿರುವ ಪೊಲೀಸರು ರಮೇಶ ಶವ ಹುಡುಕಾಟ ನಡೆಸಿದ್ದಾರೆ. ಈ ಕುರಿತು ಎಪಿಎಂಸಿ ‌ಪೊಲೀಸರು ತನಿಖೆ ನಡೆಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ