ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಮುಂಗಾರು ಮಳೆಯ ಅಭಾವ ಹಾಗೂ ಬರಗಾಲದಿಂದ ರೈತರ ಬದುಕು ತತ್ತರಿಸಿ ಹೋಗಿದೆ. ಬರ ಪರಿಹಾರದ ಮೊತ್ತ ಒಂದು ಎಕರೆಗೆ 50 ಸಾವಿರ ರೂ. ದಂತೆ ಪರಿಹಾರ ಧನ ಕೊಡಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿರುವ ಪ್ರತಿಯೊಂದು ಗ್ರಾಮಕ್ಕೆ ಕುಡಿಯಲು ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ನೀರಿನ ವ್ಯವಸ್ಥೆಯನ್ನು ತತಕ್ಷಣ ಮಾಡಬೇಕು. ರೈತರ ಸಾಲ ವಸೂಲಾತಿ ಸಂಪೂರ್ಣ ನಿಲ್ಲಿಸಬೇಕು.
ಮತ್ತು ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.
ಕಬ್ಬು ಬೆಳೆಗಾರರಿಗೆ ಬಾಕಿ ಹಣವನ್ನು ತಕ್ಷಣ ಮುಟ್ಟಿಸಬೇಕು. ಸಕ್ಕರೆ ಮಂಡಳ ನಿಗಮದಲ್ಲಿ ಸಿಬ್ಬಂದಿಗಳ ಕೊರತೆಯಿದ್ದು, ತಕ್ಷಣವೇ ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಿದರು.
ರೈತ ಮುಖಂಡರಾದ ಚುನ್ನಪ್ಪ ಪೂಜಾರಿ, ಸುರೇಶ ಪರಗಣ್ಣವರ, ಬಸವರಾಜ ಬಿಚ್ಚುರು, ರಮೇಶ ವಾಲಿ, ರಾಘವೇಂದ್ರ ನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Laxmi News 24×7